
ಗಾಂಧೀಜಿಯವರ ತತ್ವಾದರ್ಶಗಳನ್ನು ರೂಢಿಸಿಕೊಳ್ಳಿ- ಡಾ.ಶಿ.ಮು.ಶ
ಬುಧವಾರ, ಆಗಸ್ತು 16th, 2017ಮಲ್ಲಾಡಿಹಳ್ಳಿ ಗಾಂಧೀಜಿಯವರ ತತ್ವಾದರ್ಶಗಳನ್ನು ರೂಢಿಸಿಕೊಳ್ಳಬೇಕು ಎಂದು ಮಲ್ಲಾಡಿಹಳ್ಳಿಯ ಎಲ್ಲ ಶಾಲಾ ಕಾಲೇಜುಗಳ ವತಿಯಿಂದ ಏರ್ಪಡಿಸಲಾಗಿದ್ದ ಸ್ವಾತಂತ್ರ್ಯೋತ್ಸವ ದಿನಾಚರಣೆಯಲ್ಲಿ ಪೂಜ್ಯ ಶ್ರೀ ಡಾ.ಶಿವಮೂರ್ತಿ ಮುರುಘಾ ಶರಣರು ತಮ್ಮ ಸಂದೇಶದಲ್ಲಿ ತಿಳಿಸಿದರು. ಇಂದಿನ ಯುವಕರು ದುಶ್ಚಟಗಳಿಗೆ ಬಲಿಯಾಗುತ್ತಿರುವುದು ವಿಷಾದನೀಯ ಬುದ್ಧನಂತೆ ಕಟ್ಟೆಯ ಮೇಲೆ ಧ್ಯಾನಾಸಕ್ತನಾಗಿ ಯೋಚಿಸುವ ಅಗತ್ಯತೆ ಇಂದು ನಮ್ಮ ಯುವಕರಿಗೆ ಬೇಕಾಗಿದೆ ಎಂದರು. ನಾವೆಲ್ಲರೂ ಸೇರಿ ಗಾಂಧೀಜಿಯವರ ಕನಸುಗಳನ್ನು ಪ್ರೋತ್ಸಾಹಿಸುವ ದಿಕ್ಕಿನಲ್ಲಿ ಆರೋಗ್ಯಯುತ, ಶಾಂತಿಯುತ ಸಮಾಜವನ್ನು ಕಟ್ಟಬೇಕು ಎಂದರು. ಒಟ್ಟಾರೆಯಾಗಿ ಸಂಘಶಕ್ತಿ ರಾಷ್ಟ್ರಶಕ್ತಿಯಾಗಿ ರೂಪುಗೊಳ್ಳುತ್ತದೆ ಎಂದರು. ಕಾರ್ಯಕ್ರಮದಲ್ಲಿ ವಯೋನಿವೃತ್ತಿ […]