News and Events

ರಂಗಭೂಮಿಯಿಂದ ಉತ್ತಮ ವ್ಯಕ್ತಿತ್ವ-ರಂಗ ನಿರ್ದೇಶಕಿ ಶೀಲಾ ಹಾಲ್ಕುರಿಕೆ
ರಂಗಭೂಮಿಯಿಂದ ಉತ್ತಮ ವ್ಯಕ್ತಿತ್ವ-ರಂಗ ನಿರ್ದೇಶಕಿ ಶೀಲಾ ಹಾಲ್ಕುರಿಕೆ

ರಂಗಭೂಮಿಯಿಂದ ಉತ್ತಮ ವ್ಯಕ್ತಿತ್ವ ರೂಪುಗೊಳ್ಳುತ್ತದೆ ಎಂದು ರಂಗ ನಿರ್ದೇಶಕಿ

ಮಲ್ಲಾಡಿಹಳ್ಳಿ ಇಂದು ರಂಗಭೂಮಿಯಾಗಿದೆ-ಕೃಷ್ಣಮೂರ್ತಿ ಕವತ್ತಾರ್
ಮಲ್ಲಾಡಿಹಳ್ಳಿ ಇಂದು ರಂಗಭೂಮಿಯಾಗಿದೆ-ಕೃಷ್ಣಮೂರ್ತಿ ಕವತ್ತಾರ್

ಮಲ್ಲಾಡಿಹಳ್ಳಿ ಮಲ್ಲಾಡಿಹಳ್ಳಿ ಇಂದು ರಂಗಭೂಮಿಯಾಗಿದೆ ಎಂದು ಪ್ರಸಿದ್ಧ ರಂಗನಿರ್ದೇಶಕ

ಮಲ್ಲಾಡಿಹಳ್ಳಿಯಲ್ಲಿ ಜಾನಪದ ಕಲಾ ತಂಡಗಳೊಂದಿಗೆ ವೈಭವಯುತ ಮೆರವಣಿಗೆ
ಮಲ್ಲಾಡಿಹಳ್ಳಿಯಲ್ಲಿ ಜಾನಪದ ಕಲಾ ತಂಡಗಳೊಂದಿಗೆ ವೈಭವಯುತ ಮೆರವಣಿಗೆ

ಅಭಿನವ ಧನ್ವಂತರಿ, ವ್ಯಾಯಾಮ ಮೇಷ್ಟ್ರು, ತಿರುಕನಾಮಾಂಕಿತ ಪೂಜ್ಯ ಶ್ರೀ

Follow Us

ಮಲ್ಲಾಡಿಹಳ್ಳಿ ಇಂದು ರಂಗಭೂಮಿಯಾಗಿದೆ-ಕೃಷ್ಣಮೂರ್ತಿ ಕವತ್ತಾರ್

Tuesday, January 16th, 2018

ಮಲ್ಲಾಡಿಹಳ್ಳಿ
ಮಲ್ಲಾಡಿಹಳ್ಳಿ ಇಂದು ರಂಗಭೂಮಿಯಾಗಿದೆ ಎಂದು ಪ್ರಸಿದ್ಧ ರಂಗನಿರ್ದೇಶಕ ಕೃಷ್ಣಮೂರ್ತಿ ಕವತ್ತಾರ್ ಹೇಳಿದರು. ಅವರು ಮಲ್ಲಾಡಿಹಳ್ಳಿಯಲ್ಲಿ ಪೂಜ್ಯ ಶ್ರೀ ರಾಘವೇಂದ್ರ ಸ್ವಾಮೀಜಿಯವರ 22ನೇ ಹಾಗೂ ಸೂರುದಾಸ್‍ಜೀ ಸ್ವಾಮೀಜಿಯವರ 20ನೇ ಪುಣ್ಯಾರಾಧನೆ ಅಂಗವಾಗಿ ಏರ್ಪಡಿಸಿದ್ದ ತಿರುಕರಂಗ ನಾಟಕೋತ್ಸವವನ್ನು ಉದ್ಘಾಟಿಸಿ ಮಾತನಾಡುತ್ತಾ ಮಲ್ಲಾಡಿಹಳ್ಳಿಯು ಒಂದು ಕಾಲದಲ್ಲಿ ಯೋಗಭೂಮಿಯಾಗಿ, ಕರ್ಮಭೂಮಿಯಾಗಿ, ಜ್ಞಾನಭೂಮಿಯಾಗಿ ಇಂದು ರಂಗಭೂಮಿಯಾಗಿ ಸಮಾಜದಲ್ಲಿ ಹೊಸತನವನ್ನು ಮೈಗೂಡಿಸಿಕೊಂಡಿದ್ದು ಇಂದಿನ ವಿಶ್ವಸ್ತ ಸಮಿತಿಯ ಅಧ್ಯಕ್ಷ ಡಾ.ಶಿವಮೂರ್ತಿ ಮುರುಘಾ ಶರಣರ ನೇತೃತ್ವದಲ್ಲಿ ಮುಂದುವರೆಯುತ್ತಿರುವುದು ಸಂತಸದಾಯಕವಾದ ಸಂಗತಿಯಾಗಿದೆ ಧರ್ಮದ ಜೊತೆಗೆ ಸಂಸ್ಕøತಿ ಬೆರೆತಾಗ ಇವೆಲ್ಲವುಗಳು ಸಾಧ್ಯ ಎಂದರು.

ಮುಖ್ಯ ಅತಿಥಿಯಾಗಿದ್ದ ವಿಧಾನಪರಿಷತ್ ಶಾಸಕ ಎಂ.ಡಿ.ಲಕ್ಷ್ಮೀನಾರಾಯಣ ಮಾತನಾಡಿ ವೃತ್ತಿಯಲ್ಲಿ ಧನ್ಯತೆಯ ಭಾವವನ್ನು ಅನುಭವಿಸಿದಾಗ ಏನನ್ನಾದರೂ ಸಾಧಿಸಲು ಸಾಧ್ಯವಾಗುತ್ತದೆ ಎಂದರು.

ದಿವ್ಯಸಾನ್ನಿಧ್ಯವನ್ನು ವಹಿಸಿ ಆಶೀರ್ವಚನ ನೀಡಿದ ಡಾ.ಶಿವಮೂರ್ತಿ ಮುರುಘಾ ಶರಣರು ಸಮಾಜದಲ್ಲಿ ಆನಂದ ಮತ್ತು ಅನಂತತೆಯನ್ನು ಹೊಂದುವ ಜಾಗವೇ ಈ ರಂಗಭೂಮಿ ಇಲ್ಲಿ ಶಾಶ್ವತವಾಗಿ ನಿಲ್ಲುವ ವ್ಯಕ್ತಿ ಶ್ರೇಷ್ಠನಾಗುತ್ತಾನೆ. ರಂಗದಲ್ಲಿ ಸ್ಪೂರ್ತಿಯನ್ನು ಹೊಂದಿದ ವ್ಯಕ್ತಿ ಉತ್ತಮ ನಾಗರೀಕನಾಗುತ್ತಾನೆ ಎಂದರು. ಮನುಷ್ಯನ ಚಟುವಟಿಕೆಗಳು ಭೂಮಿಯ ಮೇಲೆ ಅಭಿವ್ಯಕ್ತಗೊಳಿಸಲು ರಂಗಭೂಮಿ ಉತ್ತಮ ವೇದಿಕೆ ಎಂದು ತಿಳಿಸಿದರು.

ಅಧ್ಯಕ್ಷತೆಯನ್ನು ವಹಿಸಿದ್ದ ವಿಶ್ವಸ್ತ ಪ್ರೊ.ಕೆ.ಈ.ರಾಧಾಕೃಷ್ಣ ಮಾತನಾಡಿ ಈ ನೆಲದ ಸಂಸ್ಕೃತಿಯನ್ನು ನಾವು ವಚನಗಳಲ್ಲಿ ಕಾಣಬಹುದಾಗಿದೆ. ರಂಗಭೂಮಿಯಲ್ಲಿ ನೈಜತೆಯ ಅನಾವರಣವಾಗುತ್ತದೆ ಎಂದು ತಿಳಿಸಿದರು. ಸಮಾರಂಭದಲ್ಲಿ ವಿಶ್ವಸ್ತರಾದ ಡಾ.ಜಿ.ಎನ್.ಮಲ್ಲಿಕಾರ್ಜುನಪ್ಪ, ಕೆ.ವಿ.ಪ್ರಭಾಕರ್, ವಿಶೇಷಾಧಿಕಾರಿ ಪ್ರೊ.ಕೃಷ್ಣಮೂರ್ತಿ ಹಾಗೂ ಶಾಲಾ ಕಾಲೇಜುಗಳ ಮುಖ್ಯಸ್ಥರು ಮತ್ತು ಅಧ್ಯಾಪಕರುಗಳು ಉಪಸ್ಥಿತರಿದ್ದರು. ಉಪನ್ಯಾಸಕ ತಂಗರಾಜು  ನಿರೂಪಿಸಿ, ಜಿ.ಟಿ.ಶಂಕರಮೂರ್ತಿ ವಂದಿಸಿದರು.