News and Events

ಜಾತ್ಯಾತೀತ ತತ್ವದಿಂದ ದೇಶ ಸುಭದ್ರ – ಪ್ರೊ.ಕೆ.ಈ.ರಾಧಾಕೃಷ್ಣ
ಜಾತ್ಯಾತೀತ ತತ್ವದಿಂದ ದೇಶ ಸುಭದ್ರ - ಪ್ರೊ.ಕೆ.ಈ.ರಾಧಾಕೃಷ್ಣ

ಮಲ್ಲಾಡಿಹಳ್ಳಿ 10-08-2022: ವಿದ್ಯಾರ್ಥಿ ಜೀವನದಿಂದಲೇ ಜಾತ್ಯಾತೀತ ತತ್ವವನ್ನು ಪಾಲಿಸಿದಾಗ

ವಿದ್ಯಾರ್ಥಿಗಳಿಗೆ ಏಕಾಗ್ರತೆ ಅತ್ಯವಶ್ಯ-ಬ್ರಹ್ಮನಿಷ್ಠಾನಂದ ಸ್ವಾಮೀಜಿ
ವಿದ್ಯಾರ್ಥಿಗಳಿಗೆ ಏಕಾಗ್ರತೆ ಅತ್ಯವಶ್ಯ-ಬ್ರಹ್ಮನಿಷ್ಠಾನಂದ ಸ್ವಾಮೀಜಿ

ವಿದ್ಯಾರ್ಥಿಗಳು ವಿದ್ಯಾಭ್ಯಾಸದ ಹಂತದಲ್ಲಿ ಏಕಾಗ್ರತೆ ಅತ್ಯವಶ್ಯ ಎಂದು ಚಿತ್ರದುರ್ಗ

Follow Us

ಮಲ್ಲಾಡಿಹಳ್ಳಿ ಶ್ರೀ ರಾಘವೇಂದ್ರ ಬಿ.ಇಡಿ ಕಾಲೇಜಿಗೆ ಶೇ. 98 ಫಲಿತಾಂಶ

Wednesday, January 10th, 2018

ಮಲ್ಲಾಡಿಹಳ್ಳಿ
ಯೋಗ, ಶಿಕ್ಷಣ ಮತ್ತು ಆಯುರ್ವೇದಕ್ಕೆ ಅತ್ಯಂತ ಹೆಚ್ಚು ಹೆಸರುವಾಸಿಯಾದ ಪ್ರಸಿದ್ಧ ಅನಾಥಸೇವಾಶ್ರಮದ ಶ್ರೀ ರಾಘವೇಂದ್ರ ಬಿ.ಇಡಿ ಕಾಲೇಜಿನ ಪ್ರಥಮ ಸೆಮಿಸ್ಟರ್‍ನ ಫಲಿತಾಂಶ ಬಂದಿದ್ದು ಶೇ.98 ಫಲಿತಾಂಶದೊಂದಿಗೆ ಉತ್ತಮ ಸ್ಥಾನ ಪಡೆದಿದೆ. ಎಂದು ಕಾಲೇಜಿನ ಪ್ರಾಚಾರ್ಯ ಡಾ.ಜಿ.ಯು.ನಾಗರಾಜ್ ಹೇಳಿದರು. ಈಗಾಗಲೇ ಪ್ರಥಮ ವರ್ಷದ ಬಿ.ಇಡಿ ಪ್ರವೇಶ ಪ್ರಕ್ರಿಯೆ ಪ್ರಾರಂಭಗೊಂಡಿದ್ದು ಕಾಲೇಜು ವಿದ್ಯಾರ್ಥಿಗಳಿಗೆ ಬೇಕಾದ ಎಲ್ಲ ಸೌಲಭ್ಯಗಳನ್ನು ಆಡಳಿತ ಮಂಡಳಿ ಒದಗಿಸುತ್ತಿರುವ ಹಿನ್ನೆಲೆಯಲ್ಲಿ ಇಂತಹ ಫಲಿತಾಂಶ ಲಭ್ಯವಾಗಿದೆ ಎಂದರು.

ಕುಮಾರಿ ರೇಷ್ಮಾಭಾನು 513 ಅಂಕದೊಂದಿಗೆ ಪ್ರಥಮ ಸ್ಥಾನ ಪಡೆದುಕೊಂಡರು. ಪೂಜಾ ಎಚ್.ಆರ್. ದ್ವಿತೀಯ ಹಾಗೂ ವಿದ್ಯಾಶ್ರೀ ಮತ್ತು ಉಮೈಯಾ ಸಲ್ಮಾ ತೃತೀಯ ಸ್ಥಾನ ಪಡೆದಿದ್ದಾರೆ. ಉತ್ತಮ ಫಲಿತಾಂಶ ಪಡೆದ ವಿದ್ಯಾರ್ಥಿಗಳು ಸಂಸ್ಥೆಯ ಅಧ್ಯಕ್ಷರಾದ ಪೂಜ್ಯ ಶ್ರೀ ಡಾ.ಶಿವಮೂರ್ತಿ ಮುರುಘಾ ಶರಣರು, ಅನಾಥಸೇವಾಶ್ರಮದ ಆಡಳಿತ ಮಂಡಳಿ ಹಾಗೂ ವಿಶೇಷಾಧಿಕಾರಿ ಪ್ರೊ.ಟಿ.ಎಚ್.ಕೃಷ್ಣಮೂರ್ತಿ ವಿದ್ಯಾರ್ಥಿಗಳನ್ನು ಹಾಗೂ ಪ್ರಾಚಾರ್ಯರು ಮತ್ತು ಸಿಬ್ಬಂದಿವರ್ಗದವರನ್ನು ಅಭಿನಂದಿಸಿದ್ದಾರೆ.