News and Events

ಜಾತ್ಯಾತೀತ ತತ್ವದಿಂದ ದೇಶ ಸುಭದ್ರ – ಪ್ರೊ.ಕೆ.ಈ.ರಾಧಾಕೃಷ್ಣ
ಜಾತ್ಯಾತೀತ ತತ್ವದಿಂದ ದೇಶ ಸುಭದ್ರ - ಪ್ರೊ.ಕೆ.ಈ.ರಾಧಾಕೃಷ್ಣ

ಮಲ್ಲಾಡಿಹಳ್ಳಿ 10-08-2022: ವಿದ್ಯಾರ್ಥಿ ಜೀವನದಿಂದಲೇ ಜಾತ್ಯಾತೀತ ತತ್ವವನ್ನು ಪಾಲಿಸಿದಾಗ

ವಿದ್ಯಾರ್ಥಿಗಳಿಗೆ ಏಕಾಗ್ರತೆ ಅತ್ಯವಶ್ಯ-ಬ್ರಹ್ಮನಿಷ್ಠಾನಂದ ಸ್ವಾಮೀಜಿ
ವಿದ್ಯಾರ್ಥಿಗಳಿಗೆ ಏಕಾಗ್ರತೆ ಅತ್ಯವಶ್ಯ-ಬ್ರಹ್ಮನಿಷ್ಠಾನಂದ ಸ್ವಾಮೀಜಿ

ವಿದ್ಯಾರ್ಥಿಗಳು ವಿದ್ಯಾಭ್ಯಾಸದ ಹಂತದಲ್ಲಿ ಏಕಾಗ್ರತೆ ಅತ್ಯವಶ್ಯ ಎಂದು ಚಿತ್ರದುರ್ಗ

Follow Us

ಗಾಂಧೀಜಿಯವರ ತತ್ವಾದರ್ಶಗಳನ್ನು ರೂಢಿಸಿಕೊಳ್ಳಿ- ಡಾ.ಶಿ.ಮು.ಶ

Wednesday, August 16th, 2017

ಮಲ್ಲಾಡಿಹಳ್ಳಿ
ಗಾಂಧೀಜಿಯವರ ತತ್ವಾದರ್ಶಗಳನ್ನು ರೂಢಿಸಿಕೊಳ್ಳಬೇಕು ಎಂದು ಮಲ್ಲಾಡಿಹಳ್ಳಿಯ ಎಲ್ಲ ಶಾಲಾ ಕಾಲೇಜುಗಳ ವತಿಯಿಂದ ಏರ್ಪಡಿಸಲಾಗಿದ್ದ ಸ್ವಾತಂತ್ರ್ಯೋತ್ಸವ ದಿನಾಚರಣೆಯಲ್ಲಿ ಪೂಜ್ಯ ಶ್ರೀ ಡಾ.ಶಿವಮೂರ್ತಿ ಮುರುಘಾ ಶರಣರು ತಮ್ಮ ಸಂದೇಶದಲ್ಲಿ ತಿಳಿಸಿದರು.
ಇಂದಿನ ಯುವಕರು ದುಶ್ಚಟಗಳಿಗೆ ಬಲಿಯಾಗುತ್ತಿರುವುದು ವಿಷಾದನೀಯ ಬುದ್ಧನಂತೆ ಕಟ್ಟೆಯ ಮೇಲೆ ಧ್ಯಾನಾಸಕ್ತನಾಗಿ ಯೋಚಿಸುವ ಅಗತ್ಯತೆ ಇಂದು ನಮ್ಮ ಯುವಕರಿಗೆ ಬೇಕಾಗಿದೆ ಎಂದರು. ನಾವೆಲ್ಲರೂ ಸೇರಿ ಗಾಂಧೀಜಿಯವರ ಕನಸುಗಳನ್ನು ಪ್ರೋತ್ಸಾಹಿಸುವ ದಿಕ್ಕಿನಲ್ಲಿ ಆರೋಗ್ಯಯುತ, ಶಾಂತಿಯುತ ಸಮಾಜವನ್ನು ಕಟ್ಟಬೇಕು ಎಂದರು. ಒಟ್ಟಾರೆಯಾಗಿ ಸಂಘಶಕ್ತಿ ರಾಷ್ಟ್ರಶಕ್ತಿಯಾಗಿ ರೂಪುಗೊಳ್ಳುತ್ತದೆ ಎಂದರು. ಕಾರ್ಯಕ್ರಮದಲ್ಲಿ ವಯೋನಿವೃತ್ತಿ ಹೊಂದಿದ ಪ್ರೊ.ಟಿ.ಎಚ್.ಗುಡ್ಡಪ್ಪ, ವೈ.ಬಿ.ವನಜಾಕ್ಷಮ್ಮ, ಜಿ.ಎಸ್.ಬುದ್ಧನಗೌಡರ್ ಬಿ.ಲೀಲಾವತಿ ಮತ್ತು  ಸೇವೆಯನ್ನು ಸಲ್ಲಿಸಿದ ಎಂ.ಎನ್.ವೇಣು ಮತ್ತಿತರರನ್ನು ಸನ್ಮಾನಿಸಲಾಯಿತು. ಎನ್.ಸಿ.ಸಿ ಜ್ಯೂನಿಯರ್ ವಿಭಾಗದ ಅಧಿಕಾರಿ ಆರ್.ಬಿ.ಹಾರೋಮಠರವರ ನೇತೃತ್ವದಲ್ಲಿ ಪಥಸಂಚಲನೆ ಆಕರ್ಷಕವಾಗಿ ಮೂಡಿಬಂದಿತು. ವಿಶ್ವಸ್ತರಾದ ಡಾ.ಜಿ.ಎನ್.ಮಲ್ಲಿಕಾರ್ಜುನಪ್ಪ, ಕೆ.ವಿ.ಪ್ರಭಾಕರ್, ವಿಶೇಷಾಧಿಕಾರಿ ಪ್ರೊ.ಟಿ.ಎಚ್.ಕೃಷ್ಣಮೂರ್ತಿ, ಗ್ರಾಮಪಂಚಾಯತ್ ಅಧ್ಯಕ್ಷೆ ಶಾರದಾ ಶಿವಾನಂದ ಮತ್ತು ಗ್ರಾಮಪಂಚಾಯಿತಿ ಸದಸ್ಯರು ಹಾಗೂ ಎಲ್ಲ ಶಾಲಾ ಕಾಲೇಜುಗಳ ಮುಖ್ಯಸ್ಥರು, ಅಧ್ಯಾಪಕರು ಮತ್ತು ಸಿಬ್ಬಂದಿ ವರ್ಗ ಉಪಸ್ಥಿತರಿದ್ದರು. ವಿದ್ಯಾರ್ಥಿಗಳು ಸಾಂಸ್ಕತಿಕ ಕಾರ್ಯಕ್ರಮ ನಡೆಸಿಕೊಟ್ಟರು.