News and Events

ಜಾತ್ಯಾತೀತ ತತ್ವದಿಂದ ದೇಶ ಸುಭದ್ರ – ಪ್ರೊ.ಕೆ.ಈ.ರಾಧಾಕೃಷ್ಣ
ಜಾತ್ಯಾತೀತ ತತ್ವದಿಂದ ದೇಶ ಸುಭದ್ರ - ಪ್ರೊ.ಕೆ.ಈ.ರಾಧಾಕೃಷ್ಣ

ಮಲ್ಲಾಡಿಹಳ್ಳಿ 10-08-2022: ವಿದ್ಯಾರ್ಥಿ ಜೀವನದಿಂದಲೇ ಜಾತ್ಯಾತೀತ ತತ್ವವನ್ನು ಪಾಲಿಸಿದಾಗ

ವಿದ್ಯಾರ್ಥಿಗಳಿಗೆ ಏಕಾಗ್ರತೆ ಅತ್ಯವಶ್ಯ-ಬ್ರಹ್ಮನಿಷ್ಠಾನಂದ ಸ್ವಾಮೀಜಿ
ವಿದ್ಯಾರ್ಥಿಗಳಿಗೆ ಏಕಾಗ್ರತೆ ಅತ್ಯವಶ್ಯ-ಬ್ರಹ್ಮನಿಷ್ಠಾನಂದ ಸ್ವಾಮೀಜಿ

ವಿದ್ಯಾರ್ಥಿಗಳು ವಿದ್ಯಾಭ್ಯಾಸದ ಹಂತದಲ್ಲಿ ಏಕಾಗ್ರತೆ ಅತ್ಯವಶ್ಯ ಎಂದು ಚಿತ್ರದುರ್ಗ

Follow Us

ಆಗಸ್ಟ್ 1 ರಿಂದ 3ರ ವರೆಗೆ ಮಲ್ಲಾಡಿಹಳ್ಳಿ ಸ್ವಾಮೀಜಿದ್ವಯರ ಪುಣ್ಯಾರಾಧನೆ

Thursday, July 27th, 2017

ಮಲ್ಲಾಡಿಹಳ್ಳಿ
ಯೋಗ, ಆಯುರ್ವೇದ ಮತ್ತು ಶಿಕ್ಷಣಕ್ಕೆ ಪ್ರಸಿದ್ಧವಾದ ಮಲ್ಲಾಡಿಹಳ್ಳಿ ಅನಾಥಸೇವಾಶ್ರಮದ ಸ್ಥಾಪಕರಾದ ವ್ಯಾಯಾಮ ಮೇಷ್ಟ್ರು, ಅಭಿನವ ಧನ್ವಂತರಿ ತಿರುಕನಾಮಾಂಕಿತ ಪೂಜ್ಯ ಶ್ರೀ ರಾಘವೇಂದ್ರ ಸ್ವಾಮೀಜಿ ಮತ್ತು ಅವರ ಜೊತೆಗೂಡಿ ಬಡವರ, ದೀನದಲಿತರ ಹಾಗೂ ಹಿಂದುಳಿದ ವರ್ಗದವರ ಏಳ್ಗೆಗಾಗಿ ಉತ್ತಮ ಸಂಸ್ಥೆಯನ್ನು ಕಟ್ಟಿ ಬೆಳೆಸಲು ಕಾರಣರಾದ ಪೂಜ್ಯ ಶ್ರೀ ಸೂರುದಾಸ್‍ಜೀ ಸ್ವಾಮೀಜಿದ್ವಯರ ಪುಣ್ಯಾರಾಧನೆಯು ಬರುವ ಆಗಸ್ಟ್ 1 ರಿಂದ 3ರವರೆಗೆ ನಡೆಯಲಿದೆ ಎಂದು ಅನಾಥಸೇವಾಶ್ರಮದ ವಿಶೇಷಾಧಿಕಾರಿ ಪ್ರೊ.ಟಿ.ಎಚ್.ಕೃಷ್ಣಮೂರ್ತಿ ಹೇಳಿದರು.
ಎಲ್ಲ ಶಾಲಾ ಕಾಲೇಜುಗಳ ಮುಖ್ಯಸ್ಥರು ಹಾಗೂ ದೈಹಿಕ ಶಿಕ್ಷಣ ಶಿಕ್ಷಕರು ಮತ್ತು ಕ್ಷೇಮಪಾಲಕರುಗಳ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡುತ್ತಾ ಆಗಸ್ಟ್ 1ರಿಂದ 3ರವರೆಗೆ ಧಾರ್ಮಿಕ ಹಾಗೂ ಸಾಮಾಜಿಕ ಕಾರ್ಯಕ್ರಮಗಳು ನಡೆಯಲಿದ್ದು ಸಾರ್ವಜನಿಕರಿಗೆ ಪುಣ್ಯಾರಾಧನೆ ಅಂಗವಾಗಿ ಆಗಸ್ಟ್ 2 ರಂದು ಉಚಿತವಾಗಿ ಚಿತ್ರದುರ್ಗ ಎಸ್.ಜೆ.ಎಂ. ಕಾಲೇಜಿನ ಸಹಯೋಗದಲ್ಲಿ ದಂತರೋಗ ತಪಾಸಣೆ ಹಾಗೂ ಆಯುರ್ವೇದ ಚಿಕಿತ್ಸಾ ಶಿಬಿರ ಕಾರ್ಯಕ್ರಮವನ್ನು ಸಹ ಹಮ್ಮಿಕೊಳ್ಳಲಾಗಿದ್ದು ಸಾರ್ವಜನಿಕರು ಇದರ ಉಪಯೋಗವನ್ನು ಪಡೆದುಕೊಳ್ಳಲು ಕೋರಿದರು. ಮತ್ತು ಆಗಸ್ಟ್ 2 ರಂದು ನಾಡಿಗೆ ಪೂಜ್ಯ ಶ್ರೀ ರಾಘವೇಂದ್ರ ಸ್ವಾಮೀಜಿಯವರ ಕೊಡುಗೆಯನ್ನು ಕುರಿತಂತೆ ಶಾಲಾ ಕಾಲೇಜುಗಳಿಗೆ ಭಾಷಣ ಸ್ಪರ್ಧೆ ಮತ್ತು ರಾಘವೇಂದ್ರ ಸ್ವಾಮೀಜಿಯವರ ರಚಿತ ಭಕ್ತಿಗೀತೆಗಳ ಗೀತಗಾಯನ ಸ್ಪರ್ಧೆಯನ್ನು ಏರ್ಪಡಿಸಲಾಗಿದೆ ಎಂದರು.