News and Events

ಜಾತ್ಯಾತೀತ ತತ್ವದಿಂದ ದೇಶ ಸುಭದ್ರ – ಪ್ರೊ.ಕೆ.ಈ.ರಾಧಾಕೃಷ್ಣ
ಜಾತ್ಯಾತೀತ ತತ್ವದಿಂದ ದೇಶ ಸುಭದ್ರ - ಪ್ರೊ.ಕೆ.ಈ.ರಾಧಾಕೃಷ್ಣ

ಮಲ್ಲಾಡಿಹಳ್ಳಿ 10-08-2022: ವಿದ್ಯಾರ್ಥಿ ಜೀವನದಿಂದಲೇ ಜಾತ್ಯಾತೀತ ತತ್ವವನ್ನು ಪಾಲಿಸಿದಾಗ

ವಿದ್ಯಾರ್ಥಿಗಳಿಗೆ ಏಕಾಗ್ರತೆ ಅತ್ಯವಶ್ಯ-ಬ್ರಹ್ಮನಿಷ್ಠಾನಂದ ಸ್ವಾಮೀಜಿ
ವಿದ್ಯಾರ್ಥಿಗಳಿಗೆ ಏಕಾಗ್ರತೆ ಅತ್ಯವಶ್ಯ-ಬ್ರಹ್ಮನಿಷ್ಠಾನಂದ ಸ್ವಾಮೀಜಿ

ವಿದ್ಯಾರ್ಥಿಗಳು ವಿದ್ಯಾಭ್ಯಾಸದ ಹಂತದಲ್ಲಿ ಏಕಾಗ್ರತೆ ಅತ್ಯವಶ್ಯ ಎಂದು ಚಿತ್ರದುರ್ಗ

Follow Us

ವೈದ್ಯರಿಗೆ ಕ್ರೀಡಾಚಟುವಟಿಕೆ ಅಗತ್ಯವಿದೆ – ಎಚ್.ಎಸ್. ಸಿದ್ರಾಮಸ್ವಾಮಿ

Thursday, September 30th, 2021

ಮಲ್ಲಾಡಿಹಳ್ಳಿ: ವೈದ್ಯರಿಗೆ ಹಾಗೂ ವೈದ್ಯರಾಗುವವರಿಗೆ ಕ್ರೀಡಾಚಟುವಟಿಕೆ ಅಗತ್ಯವಿದೆ ಎಂದು ಅನಾಥಸೇವಾಶ್ರಮದ ವ್ಯವಸ್ಥಾಪಕ ಎಚ್.ಎಸ್.ಸಿದ್ರಾಮಸ್ವಾಮಿ ಹೇಳಿದರು ಅವರು ಮಲ್ಲಾಡಿಹಳ್ಳಿ ಅನಾಥಸೇವಾಶ್ರಮದ ಶ್ರೀ ರಾಘವೇಂದ್ರ ಆಯುರ್ವೇದ ವೈದ್ಯಕೀಯ ಕಾಲೇಜಿನ ಘಟಿಕೋತ್ಸವದ ಮತ್ತು ವಾರ್ಷಿಕೋತ್ಸದ ಅಂಗವಾಗಿ ಮೂರು ದಿನಗಳ ಕಾಲ ಏರ್ಪಡಿಸಿದ್ದ ಕ್ರೀಡಾ ಮಹೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡುತ್ತಾ ಕೇವಲ ರೋಗಿಗಳ ಜೊತೆಯಲ್ಲಿಯೇ ಜೀವನ ಸಾಗಿಸುವ ಹುದ್ದೆಯನ್ನು ಅಲಂಕರಿಸುವ ವೈದ್ಯರು ತಮ್ಮ ಆರೋಗ್ಯದ ದೃಷ್ಠಿಯಿಂದ ಕ್ರೀಡಾ ಸ್ಪೂರ್ತಿಯಾಗಿ ಕ್ರೀಡೆಗಳಲ್ಲಿ ಭಾಗವಹಿಸುವುದರಿಂದ ಅವರ ಆರೋಗ್ಯವೂ ಸಮಾಜಕ್ಕೆ ಮುಖ್ಯವಾಗಿದೆ ಎಂದರು. ಉತ್ತಮ ಗಾಳಿ, ಚುರುಕಿನ ದೇಹವಿದ್ದಲ್ಲಿ ಲವಲವಿಕೆ ಉಂಟಾಗುತ್ತದೆ ಇದರಿಂದ ಉತ್ತಮ ಶುಶ್ರೂಷೆ ಮಾಡಲು ಅನುಕೂಲವಾಗುತ್ತದೆ ಎಂದರು.

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಕ್ರೀಡಾಚಟುವಟಿಕೆಗಳನ್ನು ಸಮರ್ಪಕವಾಗಿ ನಿರ್ವಹಿಸುತ್ತಿರುವ ಮಲ್ಲಾಡಿಹಳ್ಳಿ ಶತಮಾನೋತ್ಸವ ಬಿ.ಪಿ.ಇಡಿ ಕಾಲೇಜಿನ ಪ್ರಾಚಾರ್ಯ ಟಿ.ವೆಂಕಟೇಶ್ ಮಾತನಾಡಿ ದೈಹಿಕ ಶಿಕ್ಷಣದ ಜೊತೆಯಲ್ಲಿ ವೈದ್ಯಕೀಯ ಶಿಕ್ಷಣದ ವಿದ್ಯಾರ್ಥಿಗಳು ಆಟೋಟಗಳಲ್ಲಿ ಭಾಗವಹಿಸಿದಾಗ ದೈಹಿಕ ಮತ್ತು ಮಾನಸಿಕ ಆರೋಗ್ಯ ವೃದ್ಧಿಸುತ್ತದೆ ಎಂದರು ಈ ನಿಟ್ಟಿನಲ್ಲಿ ಪ್ರತಿವರ್ಷವೂ ಇಂತಹ ಕ್ರೀಡೋತ್ಸವಗಳು ನಡೆಯುತ್ತಿದ್ದಾಗ ಮಾತ್ರ ಭವಿಷ್ಯತ್ತಿನಲ್ಲಿ ಇದನ್ನು ರೂಢಿಸಿಕೊಳ್ಳಲು ಸಾಧ್ಯವಾಗುತ್ತದೆ ಎಂದರು. ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಆಯುರ್ವೇದ ಕಾಲೇಜಿನ ಪ್ರಾಚಾರ್ಯ ಡಾ|| ಎಸ್. ನಾಗರಾಜ ಮಾತನಾಡಿ ಅನಾಥಸೇವಾಶ್ರಮದ ಸಹಕಾರ ಮತ್ತು ಉತ್ತಮ ವ್ಯವಸ್ಥೆಗಳಿಂದ ವೈದ್ಯಕೀಯ ವಿದ್ಯಾರ್ಥಿಗಳಿಗೆ ಆಗುವ ಎಲ್ಲಾ ಅನುಕೂಲಗಳನ್ನು ಕಲ್ಪಿಸಲು ಸಿದ್ಧರಾಗಿದ್ದೇವೆ ಇಲ್ಲಿ ಕಲಿಯುವ ವಿದ್ಯಾರ್ಥಿಗಳಿಗೆ ವೃತ್ತಿಶಿಕ್ಷಣದ ಜೊತೆಯಲ್ಲಿ ನೈತಿಕ, ಸಾಂಸ್ಕøತಿಕ ಚಟುವಟಿಕೆಗಳನ್ನು ಕಲಿಸಲಾಗುತ್ತದೆ ಎಂದರು. ಕ್ರೀಡೋತ್ಸವದಲ್ಲಿ ದೈಹಿಕ ಶಿಕ್ಷಣ ಮತ್ತು ಆಯುರ್ವೇದ ಶಿಕ್ಷಣ ಮಹಾವಿದ್ಯಾಲಯದ ಉಪನ್ಯಾಸಕರು, ಸಿಬ್ಬಂದಿವರ್ಗ ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.