ಮಲ್ಲಾಡಿಹಳ್ಳಿ 10-08-2022: ವಿದ್ಯಾರ್ಥಿ ಜೀವನದಿಂದಲೇ ಜಾತ್ಯಾತೀತ ತತ್ವವನ್ನು ಪಾಲಿಸಿದಾಗ
ವಿದ್ಯಾರ್ಥಿಗಳು ವಿದ್ಯಾಭ್ಯಾಸದ ಹಂತದಲ್ಲಿ ಏಕಾಗ್ರತೆ ಅತ್ಯವಶ್ಯ ಎಂದು ಚಿತ್ರದುರ್ಗ
ಹೊಳಲ್ಕೆರೆ ತಾಲ್ಲೂಕಿನ ಮಲ್ಲಾಡಿಹಳ್ಳಿ ಅನಾಥಸೇವಾಶ್ರಮದ ಆಶ್ರಯದಲ್ಲಿ ನಡೆಯುತ್ತಿರುವ ದುಮ್ಮಿಯ ಅರುಣೋದಯ ಪ್ರೌಢಶಾಲೆಗೆ ಶೇ.96 ಫಲಿತಾಂಶ ದೊರೆತಿದೆ ಕನ್ನಡ ಮಾಧ್ಯಮದಲ್ಲಿ ತಾಲ್ಲೂಕಿಗೆ ದ್ವಿತೀಯ ಸ್ಥಾನ ಪಡೆದ ಶಂಕರಮೂರ್ತಿ 581 ಅಂಕಗಳಿಸಿರುತ್ತಾನೆ ಎಂದು ವ್ಯವಸ್ಥಾಪಕ ಎಚ್.ಎಸ್.ಸಿದ್ರಾಮಸ್ವಾಮಿ ತಿಳಿಸಿದರು. ಇದೇ ಸಂದರ್ಭದಲ್ಲಿ ಮಲ್ಲಾಡಿಹಳ್ಳಿ ಪದವಿಪೂರ್ವ ಕಾಲೇಜಿನ ಪ್ರೌಢಶಾಲೆಯ ಫಲಿತಾಂಶ ಶೇ.69 ಬಂದಿದ್ದು ಆಂಗ್ಲ ಮಾಧ್ಯಮದ ಆದಿತ್ಯ ಗಣಾಚಾರಿ 602 ಅಂಕಗಳಿಸಿ, ಜಮುನಾ ಮತ್ತು ಐಶ್ವರ್ಯ 596 ಕ್ರಮವಾಗಿ ದ್ವಿತೀಯ ಸ್ಥಾನಗಳಿಸಿದ್ದಾರೆ. ಶ್ರೀ ರಾಘವೇಂದ್ರ ಗುರುಕುಲ ವಿದ್ಯಾಪೀಠ ಪ್ರೌಢಶಾಲೆಯ ಫಲಿತಾಂಶವು ಶೇ.60 ಬಂದಿರುತ್ತದೆ.
ಉತ್ತಮ ಫಲಿತಾಂಶ ಬರಲು ಕಾರಣರಾದ ಮುಖ್ಯಸ್ಥರು ಅಧ್ಯಾಪಕರು, ಸಿಬ್ಬಂದಿವರ್ಗದವರು ಹಾಗೂ ವಿದ್ಯಾರ್ಥಿಗಳಿಗೆ ಪೂಜ್ಯ ಶ್ರೀ ಡಾ.ಶಿವಮೂರ್ತಿ ಮುರುಘಾ ಶರಣರು ಹಾಗೂ ವಿಶ್ವಸ್ತರು ಅಭಿನಂದಿಸಿರುತ್ತಾರೆ.