ಸುದ್ದಿಗಳು

ಜಾತ್ಯಾತೀತ ತತ್ವದಿಂದ ದೇಶ ಸುಭದ್ರ – ಪ್ರೊ.ಕೆ.ಈ.ರಾಧಾಕೃಷ್ಣ
ಜಾತ್ಯಾತೀತ ತತ್ವದಿಂದ ದೇಶ ಸುಭದ್ರ - ಪ್ರೊ.ಕೆ.ಈ.ರಾಧಾಕೃಷ್ಣ

ಮಲ್ಲಾಡಿಹಳ್ಳಿ 10-08-2022: ವಿದ್ಯಾರ್ಥಿ ಜೀವನದಿಂದಲೇ ಜಾತ್ಯಾತೀತ ತತ್ವವನ್ನು ಪಾಲಿಸಿದಾಗ

ವಿದ್ಯಾರ್ಥಿಗಳಿಗೆ ಏಕಾಗ್ರತೆ ಅತ್ಯವಶ್ಯ-ಬ್ರಹ್ಮನಿಷ್ಠಾನಂದ ಸ್ವಾಮೀಜಿ
ವಿದ್ಯಾರ್ಥಿಗಳಿಗೆ ಏಕಾಗ್ರತೆ ಅತ್ಯವಶ್ಯ-ಬ್ರಹ್ಮನಿಷ್ಠಾನಂದ ಸ್ವಾಮೀಜಿ

ವಿದ್ಯಾರ್ಥಿಗಳು ವಿದ್ಯಾಭ್ಯಾಸದ ಹಂತದಲ್ಲಿ ಏಕಾಗ್ರತೆ ಅತ್ಯವಶ್ಯ ಎಂದು ಚಿತ್ರದುರ್ಗ

Follow Us

ಮಲ್ಲಾಡಿಹಳ್ಳಿ ಶ್ರೀ ರಾಘವೇಂದ್ರ ಬಿ.ಇಡಿ ಕಾಲೇಜಿಗೆ ಶೇ.100 ಫಲಿತಾಂಶ

ಗುರುವಾರ, ಸೆಪ್ಟೆಂಬರ 2nd, 2021

ಮಲ್ಲಾಡಿಹಳ್ಳಿ: ಹೊಳಲ್ಕೆರೆ ತಾಲ್ಲೂಕಿನ ಮಲ್ಲಾಡಿಹಳ್ಳಿ ಅನಾಥಸೇವಾಶ್ರಮದ ಶ್ರೀ ರಾಘವೇಂದ್ರ ಶಿಕ್ಷಣ ಮಹಾವಿದ್ಯಾಲಯದ ದ್ವಿತೀಯ ಹಾಗೂ ಚತುರ್ಥ ಸೆಮಿಸ್ಟರ್‍ನ ವಿದ್ಯಾರ್ಥಿಗಳು ಶೇ.100ರಷ್ಟು ಫಲಿತಾಂಶ ಪಡೆದು ಸಂಸ್ಥೆಗೆ ಹಾಗೂ ಕಾಲೇಜಿಗೆ ಕೀರ್ತಿ ತಂದಿರುತ್ತಾರೆ ಎಂದು ಕಾಲೇಜಿನ ಪ್ರಾಚಾರ್ಯ ಡಾ.ಜಿ.ಯು.ನಾಗರಾಜ್ ಹೇಳಿದರು.

ದ್ವಿತೀಯ ವರ್ಷದ ಚತುರ್ಥ ಸೆಮಿಸ್ಟರ್‍ನಲ್ಲಿ ಗೋಪಿ 538 ಅಂಕಗಳೊಂದಿಗೆ ಶೇ. 90ಗಳಿಸಿ ಪ್ರಥಮ ಸ್ಥಾನ ಪಡೆದರೆ ಚಿತ್ರಲೇಖ ಮತ್ತು ದಿವ್ಯಾ 89ಶೇ ದೊಂದಿಗೆ ದ್ವಿತೀಯ ಸ್ಥಾನ ಪಡೆದರು. ಶಬನಮ್ ಪರ್ವೀನ್ ತೃತೀಯ ಸ್ಥಾನ ಪಡೆದರು. ಪ್ರಥಮ ವರ್ಷದ ದ್ವಿತೀಯ ಸೆಮಿಸ್ಟರ್‍ನಲ್ಲಿ ಗುಲ್ಜಾರ್ ಬಾನು 519 ಅಂಕಗಳೊಂದಿಗೆ ಪ್ರಥಮ ಸ್ಥಾನ ಪಡೆದರು. ಪಾರಿಜಾತ.ಕೆ. ಹಾಗೂ ಮಜೀದ್ ಉನ್ನೀಸಾ ಕ್ರಮವಾಗಿ ದ್ವಿತೀಯ ಹಾಗೂ ತೃತೀಯ ಸ್ಥಾನ ಪಡೆದರು. ನುರಿತ ಬೋಧಕ ಸಿಬ್ಬಂದಿ, ಸುಸಜ್ಜಿತ ಕಟ್ಟಡ, ವಾಚನಾಲಯ ಮತ್ತು ಪಾಟೋಪಕರಣಗಳನ್ನು ಹೊಂದಿದ ಕಾಲೇಜು ಎಂಬ ಹೆಸರನ್ನು ಪಡೆದುಕೊಂಡಿದೆ.

ಉತ್ತಮ ಫಲಿತಾಂಶ ಪಡೆದ ವಿದ್ಯಾರ್ಥಿಗಳನ್ನು ಸಂಸ್ಥೆಯ ಅಧ್ಯಕ್ಷರಾದ ಡಾ.ಶಿವಮೂರ್ತಿ ಮುರುಘಾ ಶರಣರು, ವಿಶ್ವಸ್ತರು ಹಾಗೂ ವ್ಯವಸ್ಥಾಪಕ ಎಚ್.ಎಸ್.ಸಿದ್ರಾಮ ಸ್ವಾಮಿ ಅಭಿನಂದಿಸಿದ್ದಾರೆ.