ಸುದ್ದಿಗಳು

ಜಾತ್ಯಾತೀತ ತತ್ವದಿಂದ ದೇಶ ಸುಭದ್ರ – ಪ್ರೊ.ಕೆ.ಈ.ರಾಧಾಕೃಷ್ಣ
ಜಾತ್ಯಾತೀತ ತತ್ವದಿಂದ ದೇಶ ಸುಭದ್ರ - ಪ್ರೊ.ಕೆ.ಈ.ರಾಧಾಕೃಷ್ಣ

ಮಲ್ಲಾಡಿಹಳ್ಳಿ 10-08-2022: ವಿದ್ಯಾರ್ಥಿ ಜೀವನದಿಂದಲೇ ಜಾತ್ಯಾತೀತ ತತ್ವವನ್ನು ಪಾಲಿಸಿದಾಗ

ವಿದ್ಯಾರ್ಥಿಗಳಿಗೆ ಏಕಾಗ್ರತೆ ಅತ್ಯವಶ್ಯ-ಬ್ರಹ್ಮನಿಷ್ಠಾನಂದ ಸ್ವಾಮೀಜಿ
ವಿದ್ಯಾರ್ಥಿಗಳಿಗೆ ಏಕಾಗ್ರತೆ ಅತ್ಯವಶ್ಯ-ಬ್ರಹ್ಮನಿಷ್ಠಾನಂದ ಸ್ವಾಮೀಜಿ

ವಿದ್ಯಾರ್ಥಿಗಳು ವಿದ್ಯಾಭ್ಯಾಸದ ಹಂತದಲ್ಲಿ ಏಕಾಗ್ರತೆ ಅತ್ಯವಶ್ಯ ಎಂದು ಚಿತ್ರದುರ್ಗ

Follow Us

ಅಭಿನಯದ ಮೂಲಕ ಬೋಧನೆ ಪರಿಣಾಮಕಾರಿ – ಪ್ರೊ.ಟಿ.ಎಚ್.ಕೃಷ್ಣಮೂರ್ತಿ

ಮಂಗಳವಾರ, ಮೇ 16th, 2017

ಮಲ್ಲಾಡಿಹಳ್ಳಿ
ಶಿಕ್ಷಕನು ಅಭಿನಯವನ್ನು ಕಲಿತುಕೊಂಡು ಅಭಿನಯಿಸುತ್ತಾ ಬೋಧಿಸಿದಾಗ ಪಠ್ಯ ಹೆಚ್ಚು ಪರಿಣಾಮಕಾರಿಯಾಗುತ್ತದೆ ಎಂದು ಅನಾಥಸೇವಾಶ್ರಮದ ವಿಶೇಷಾಧಿಕಾರಿ ಪ್ರೊ.ಟಿ.ಎಚ್.ಕೃಷ್ಣಮೂರ್ತಿ ಹೇಳಿದರು. ಅವರು ಮಲ್ಲಾಡಿಹಳ್ಳಿ ಅನಾಥಸೇವಾಶ್ರಮದ ಶ್ರೀ ರಾಘವೇಂದ್ರ ಶಿಕ್ಷಣ ಮಹಾವಿದ್ಯಾಲಯದಲ್ಲಿ ಏರ್ಪಡಿಸಲಾದ 2 ದಿನದ ಶಿಕ್ಷಣದಲ್ಲಿ ರಂಗಕಲೆ ನಾಟಕ ತರಬೇತಿ ಮತ್ತು ಪ್ರದರ್ಶನ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಪ್ರಶಿಕ್ಷಣಾರ್ಥಿಗಳನ್ನು ಉದ್ಧೇಶಿಸಿ ಮಾತನಾಡುತ್ತಾ ಯಾವುದೇ ವಿಷಯವನ್ನು ಶಿಕ್ಷಕ ಬೋಧಿಸುವ ಸಮಯದಲ್ಲಿ ಬೋಧನೆಗೆ ನಾಟಕಾಭಿಯವನ್ನು ಸೇರಿಸಿಕೊಂಡು ಬೋಧಿಸಿದಾಗ ಹೆಚ್ಚು ಪರಿಣಾಮಕಾರಿಯಾಗುವುದಲ್ಲದೆ ಯಾವುದೇ ವಿಷಯವನ್ನು ವಿದ್ಯಾರ್ಥಿಗಳಲ್ಲಿ ಅಚ್ಚಳಿಯದೇ ಉಳಿಸಲು ಸಾಧ್ಯವಾಗುತ್ತದೆ ಎಂದರು.
ಹಿರಿಯ ಉಪನ್ಯಾಸಕ ಎನ್.ಧನಂಜಯ ಮಾತನಾಡಿ ನಾಟಕ ತರಬೇತಿಯನ್ನು ಪಡೆದು ಸ್ಥಳೀಯವಾಗಿ ಲಭ್ಯವಿರುವ ಪರಿಕರಗಳನ್ನು ಉಪಯೋಗಿಸಿಕೊಂಡು ಪ್ರದರ್ಶನ ನೀಡುವ ಕಲೆಯನ್ನು ಕಲಿತುಕೊಳ್ಳಬೇಕಾಗುತ್ತದೆ. ಹಾಗೆಯೇ ಲಭ್ಯವಿರುವ ಸಂಪನ್ಮೂಲಗಳನ್ನು ಹೇಗೆ ಪರಿಕರಗಳನ್ನಾಗಿ ಮಾಡಿಕೊಳ್ಳಬೇಕು ಎಂಬುದನ್ನು ತಜ್ಞರ ಮಾರ್ಗದರ್ಶನದಲ್ಲಿ ಅರಿತುಕೊಳ್ಳಬೇಕು ಎಂದರು.
ಇದೇ ಸಂದರ್ಭದಲ್ಲಿ ಉಪನ್ಯಾಸಕ ಎನ್.ಎಸ್.ರುದ್ರೇಶ್ ಮಾರ್ಗದರ್ಶನದಲ್ಲಿ ಪ್ರಶಿಕ್ಷಣಾರ್ಥಿಗಳು ನಾಲ್ಕು ತಂಡಗಳನ್ನಾಗಿ ರಚಿಸಿಕೊಂಡು 4 ಕಿರು ನಾಟಕಗಳ ಪ್ರದರ್ಶನ ಮಾಡಿ ಪ್ರೇಕ್ಷಕರನ್ನು ರಂಜಿಸಿದರು. ಉಪನ್ಯಾಸಕರು ಹಾಗೂ ಸಿಬ್ಬಂದಿವರ್ಗದವರು ಇದೇ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಮಲ್ಲಾಡಿಹಳ್ಳಿ ಪ್ರೌಢಶಾಲೆಗೆ ಉತ್ತಮ ಫಲಿತಾಂಶ
ಇಲ್ಲಿಯ ಅನಾಥಸೇವಾಶ್ರಮ ಪ್ರೌಢಶಾಲೆಯು ಪ್ರಸಕ್ತ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಶೇ.79ರನ್ನು ಪಡೆದುಕೊಂಡು ಉತ್ತಮ ಫಲಿತಾಂಶವನ್ನು ಹೊಂದಿರುವುದು ಸಂತಸವಾಗಿದೆ ಎಂದು ಅನಾಥಸೇವಾಶ್ರಮದ ವಿಶೇಷಾಧಿಕಾರಿ ಪ್ರೊ.ಟಿ.ಎಚ್.ಕೃಷ್ಣಮೂರ್ತಿ ಹೇಳಿದರು. ಒಟ್ಟು ಪರೀಕ್ಷೆಗೆ ಹಾಜರಾದ ವಿದ್ಯಾರ್ಥಿಗಳಲ್ಲಿ 7 ವಿದ್ಯಾರ್ಥಿಗಳು ಅತ್ಯುನ್ನತ ಶ್ರೇಣಿಯನ್ನು ಪಡೆದುಕೊಂಡಿರುತ್ತಾರೆ. ಮಲ್ಲಾಡಿಹಳ್ಳಿ ಗ್ರಾಮದ ಎಸ್.ಯು.ಅಖಿಲಾ ಶೇ.96 ಅಂಕಗಳನ್ನು ಪಡೆದು ಶಾಲೆಗೆ ಪ್ರಥಮ ಸ್ಥಾನ ಪಡೆದಿರುತ್ತಾಳೆ. ಉನ್ನತ ಶ್ರೇಣಿಯಲ್ಲಿ 20 ವಿದ್ಯಾರ್ಥಿಗಳು ಮತ್ತು ಪ್ರಥಮ ಶ್ರೇಣಿಯಲ್ಲಿ 43 ವಿದ್ಯಾರ್ಥಿಗಳು ಪಡೆದುಕೊಂಡು ಸಂಸ್ಥೆಯ ಕೀರ್ತಿಯನ್ನು ಹೆಚ್ಚಿಸಿರುತ್ತಾರೆ. ಮೊದಲಿನಿಂದಲೂ ಶಿಸ್ತು, ಸಂಸ್ಕಾರ ಮತ್ತು ಶಿಕ್ಷಣಕ್ಕೆ ಹೆಸರಾದ ಮಲ್ಲಾಡಿಹಳ್ಳಿ ಅನಾಥಸೇವಾಶ್ರಮದ ಪಾರದರ್ಶಕ ಫಲಿತಾಂಶವನ್ನು ತಂದುಕೊಟ್ಟ ಅಧ್ಯಾಪಕರನ್ನು ಹಾಗೂ ವಿದ್ಯಾರ್ಥಿಗಳನ್ನು ಪೂಜ್ಯ ಶ್ರೀ ಡಾ.ಶಿವಮೂರ್ತಿ ಮುರುಘಾ ಶರಣರು ಅಭಿನಂದಿಸಿದ್ದಾರೆ.