ಸುದ್ದಿಗಳು

ಜಾತ್ಯಾತೀತ ತತ್ವದಿಂದ ದೇಶ ಸುಭದ್ರ – ಪ್ರೊ.ಕೆ.ಈ.ರಾಧಾಕೃಷ್ಣ
ಜಾತ್ಯಾತೀತ ತತ್ವದಿಂದ ದೇಶ ಸುಭದ್ರ - ಪ್ರೊ.ಕೆ.ಈ.ರಾಧಾಕೃಷ್ಣ

ಮಲ್ಲಾಡಿಹಳ್ಳಿ 10-08-2022: ವಿದ್ಯಾರ್ಥಿ ಜೀವನದಿಂದಲೇ ಜಾತ್ಯಾತೀತ ತತ್ವವನ್ನು ಪಾಲಿಸಿದಾಗ

ವಿದ್ಯಾರ್ಥಿಗಳಿಗೆ ಏಕಾಗ್ರತೆ ಅತ್ಯವಶ್ಯ-ಬ್ರಹ್ಮನಿಷ್ಠಾನಂದ ಸ್ವಾಮೀಜಿ
ವಿದ್ಯಾರ್ಥಿಗಳಿಗೆ ಏಕಾಗ್ರತೆ ಅತ್ಯವಶ್ಯ-ಬ್ರಹ್ಮನಿಷ್ಠಾನಂದ ಸ್ವಾಮೀಜಿ

ವಿದ್ಯಾರ್ಥಿಗಳು ವಿದ್ಯಾಭ್ಯಾಸದ ಹಂತದಲ್ಲಿ ಏಕಾಗ್ರತೆ ಅತ್ಯವಶ್ಯ ಎಂದು ಚಿತ್ರದುರ್ಗ

Follow Us

ವಿದ್ಯಾರ್ಥಿಗಳಿಗೆ ಏಕಾಗ್ರತೆ ಅತ್ಯವಶ್ಯ-ಬ್ರಹ್ಮನಿಷ್ಠಾನಂದ ಸ್ವಾಮೀಜಿ

ಮಂಗಳವಾರ, ಜುಲಾಯಿ 26th, 2022

ವಿದ್ಯಾರ್ಥಿಗಳು ವಿದ್ಯಾಭ್ಯಾಸದ ಹಂತದಲ್ಲಿ ಏಕಾಗ್ರತೆ ಅತ್ಯವಶ್ಯ ಎಂದು ಚಿತ್ರದುರ್ಗ ಶಾರದಾ ರಾಮಕೃಷ್ಣ ಮಠದ ಬ್ರಹ್ಮನಿಷ್ಠಾನಂದ ಸ್ವಾಮೀಜಿ ತಿಳಿಸಿದರು. ಅವರು ಮಲ್ಲಾಡಿಹಳ್ಳಿ ಅನಾಥಸೇವಾಶ್ರಮದ ಶ್ರೀ ರಾಘವೇಂದ್ರ ಜ್ಞಾನಮಂಟಪದಲ್ಲಿ ಏರ್ಪಡಿಸಿದ್ದ ಪದವಿಪೂರ್ವ ಕಾಲೇಜುಗಳು ಹಾಗೂ ಪ್ರೌಢಶಾಲೆಗಳ ಪರೀಕ್ಷೆಯಲ್ಲಿ ಅತೀ ಹೆಚ್ಚು ಅಂಕಗಳಿಸಿದ ವಿದ್ಯಾರ್ಥಿಗಳನ್ನು ಪುರಸ್ಕರಿಸಿ ಮಾತನಾಡುತ್ತಾ ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗೆ ಸಹಜವಾಗಿ ಏಕಾಗ್ರತೆ ಹೆಚ್ಚಿರುತ್ತದೆ ಅದನ್ನು ಮತ್ತಷ್ಟು ತೀವ್ರಗೊಳಿಸಿದಾಗ ಪರೀಕ್ಷೆಗಳಲ್ಲಿ ನಿರ್ಭೀತಿಯಿಂದ ಎದುರಿಸುವ ಶಕ್ತಿ ಬರುತ್ತದೆ, ಕಲೆ, ಸಾಹಿತ್ಯ ಮತ್ತು ಸಂಸ್ಕೃತಿಯ ಚಟುವಟಿಕೆಗಳನ್ನು ವಿದ್ಯಾರ್ಥಿ ಹಂತದಲ್ಲಿ ರೂಢಿಸಿಕೊಂಡಾಗ ಉತ್ತಮ ನಾಗರೀಕರಾಗಲು ಸಾಧ್ಯವಾಗುತ್ತದೆ ಹಿಂದಿನಿಂದಲೂ ಮಲ್ಲಾಡಿಹಳ್ಳಿ ಸಂಸ್ಥೆಯು ಇಂತಹ ಚಟುವಟಿಕೆಗಳಿಗೆ ಹೆಸರಾಗಿದೆ ಇಲ್ಲಿಯ ಸಂಸ್ಥೆಯ ಸ್ಥಾಪಕರಾಗಿದ್ದ ರಾಘವೇಂದ್ರ ಸ್ವಾಮೀಜಿಯವರ ಮತ್ತು ಸೂರುದಾಸ್ ಸ್ವಾಮೀಜಿಯವರ ಹಾಗೂ ಇಂದಿನ ಅಧ್ಯಕ್ಷರಾದ ಡಾ.ಶಿವಮೂರ್ತಿ ಮುರುಘಾ ಶರಣರ ತತ್ವಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಿ ಎಂದರು.

ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನಗೊಳ್ಳಲು ಯೋಗದ ಅವಶ್ಯಕತೆ ಇದ್ದು ಅದನ್ನು ಸಹ ರೂಢಿಮಾಡಿಕೊಳ್ಳಬೇಕು ಎಂದು ಪ್ರೌಢಶಾಲಾ ವಿಭಾಗದ ಉಪಪ್ರಾಚಾರ್ಯ ಆರ್.ಬಿ.ಹಾರೋಮಠ್ ತಿಳಿಸಿದರು. ಸಮಯ ಪ್ರಜ್ಞೆ, ಶಿಸ್ತುಬದ್ಧ ಜೀವನವನ್ನು ರೂಪಿಸಿಕೊಳ್ಳಲು ಪ್ರೌಢಹಂತದಲ್ಲಿ ಎಲ್ಲಾ ರೀತಿಯ ಮಾರ್ಗದರ್ಶನವನ್ನು ಮಲ್ಲಾಡಿಹಳ್ಳಿಯ ಶಾಲಾ ಕಾಲೇಜುಗಳಲ್ಲಿ ತಿಳಿಸಿಕೊಡಲಾಗುತ್ತದೆ ಸಕ್ರೀಯವಾಗಿ ತೊಡಗಿಕೊಂಡು ಭವಿಷ್ಯವನ್ನು ರೂಪಿಸಿಕೊಳ್ಳಿ ಎಂದು ಸಲಹೆ ನೀಡಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಆಡಳಿತಾಧಿಕಾರಿ ಎಚ್.ಎಸ್.ಸಿದ್ರಾಮಸ್ವಾಮಿ ಮಾತನಾಡಿ ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ಬೇಕಾದ ಎಲ್ಲಾ ಸೌಲಭ್ಯಗಳನ್ನು ಕಲ್ಪಿಸಿಕೊಡಲು ಮಲ್ಲಾಡಿಹಳ್ಳಿ ಅನಾಥಸೇವಾಶ್ರಮವು ಬದ್ಧವಾಗಿದೆ ಇಲ್ಲಿ ಕಲಿತ ವಿದ್ಯಾರ್ಥಿಗಳು ಉತ್ತಮ ಪ್ರಜೆಗಳಾಗುವರು ಎಂದರು.

ದ್ವಿತೀಯ ಪಿ.ಯು.ಸಿ ಹಾಗೂ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಅತೀ ಹೆಚ್ಚು ಅಂಕಗಳಿಸಿದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. ಪ್ರಾಚಾರ್ಯರಾದ ಜಿ.ಎಸ್.ಶಿವಕುಮಾರ್, ಜೆ.ಸಿದ್ಧಲಿಂಗಪ್ಪ ಉಪಸ್ಥಿತರಿದ್ದರು. ಬಿ.ಪಿ.ಇಡಿ ಕಾಲೇಜಿನ ಪ್ರಾಚಾರ್ಯ ಟಿ.ಲೋಕೇಶ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಶಿಕ್ಷಕರಾದ ಜಿ.ಟಿ.ಶಂಕರಮೂರ್ತಿ ಸ್ವಾಗತಿಸಿ, ಎಂ.ಓ.ಸ್ವಾಮಿ ನಿರೂಪಿಸಿ, ಎಸ್.ಎಂ.ಗೌಡ ವಂದಿಸಿದರು. ಎಲ್ಲಾ ಶಾಲಾ ಕಾಲೇಜುಗಳ ಮುಖ್ಯಸ್ಥರು, ಅಧ್ಯಾಪಕರು ಮತ್ತು ಸಿಬ್ಬಂದಿವರ್ಗದವರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.