ಮಲ್ಲಾಡಿಹಳ್ಳಿ 10-08-2022: ವಿದ್ಯಾರ್ಥಿ ಜೀವನದಿಂದಲೇ ಜಾತ್ಯಾತೀತ ತತ್ವವನ್ನು ಪಾಲಿಸಿದಾಗ
ವಿದ್ಯಾರ್ಥಿಗಳು ವಿದ್ಯಾಭ್ಯಾಸದ ಹಂತದಲ್ಲಿ ಏಕಾಗ್ರತೆ ಅತ್ಯವಶ್ಯ ಎಂದು ಚಿತ್ರದುರ್ಗ
ಜೀವನದಲ್ಲಿ ಶಿಸ್ತನ್ನು ಬೆಳೆಸಿಕೊಂಡು ಉತ್ತಮ ನಾಗರೀಕರಾಗುವಂತೆ ಡಾ.ಶಿವಮೂರ್ತಿ ಮುರುಘ ಶರಣರು ತಿಳಿಸಿದರು. ಅವರು ಹೊಳಲ್ಕೆರೆ ತಾಲ್ಲೂಕು ಮಲ್ಲಾಡಿಹಳ್ಳಿ ಅನಾಥಸೇವಾಶ್ರಮದ ಎಲ್ಲ ಶಾಲಾ ಕಾಲೇಜುಗಳ ವತಿಯಿಂದ ಏರ್ಪಡಿಸಿದ್ದ 67ನೇ ಗಣರಾಜ್ಯೋತ್ಸವದಲ್ಲಿ ಧ್ವಜಾರೋಹಣ ಕಾರ್ಯಕ್ರಮವನ್ನು ನೆರವೇರಿಸಿ ಮಾತನಾಡುತ್ತಾ ವಿದ್ಯಾರ್ಥಿಗಳು ಉತ್ತಮ ನಾಗರೀಕರಾಗಲು ಉತ್ತಮ ಶಿಕ್ಷಣವನ್ನು ಪಡೆಯಬೇಕು ಉತ್ತಮ ಸಂಸ್ಕøತಿಯನ್ನು ಮೈಗೂಡಿಸಿಕೊಳ್ಳಬೇಕು ಮುಂದೆ ಉತ್ತಮ ನಾಗರೀಕರಾಗಿ ಉತ್ತಮ ಸಮಾಜದ ನಿರ್ಮಾಣ ಸಾಧ್ಯವಾಗುತ್ತದೆ ಎಂದರು. ಅನಾಥಸೇವಾಶ್ರಮವು ಉತ್ತಮ ಶಿಕ್ಷಣ ನೀಡಲು ಪೂರಕವಾದ ಎಲ್ಲ ವ್ಯವಸ್ಥೆಗಳನ್ನು ಮಾಡಿದ್ದು ಇಂದು ಇಲ್ಲಿ ಓದುವ ವಿದ್ಯಾರ್ಥಿಗಳು ಉತ್ತಮ ನಾಗರೀಕರನ್ನಾಗಿರುವುದನ್ನು ಸಮಾಜದಲ್ಲಿ ನೋಡುತ್ತಿದ್ದೇವೆ ಎಂದರು. ದೇಶಕ್ಕಾಗಿ ಹೋರಾಡಿದ ಮಹಾನ್ ದೇಶ ಭಕ್ತರನ್ನು ನೆನಪಿಸಿಕೊಂಡು ಅವರ ಚರಿತ್ರೆಗಳನ್ನು ಓದಿ ಅವರಂತೆ ಮುಂದೆ ಸಾಗಬೇಕು ಎಂದು ಕರೆ ನೀಡಿದರು.
ಕಾರ್ಯಕ್ರಮದಲ್ಲಿ ವಿಶ್ವಸ್ತರಾದ ಜಿ.ಎನ್.ಮಲ್ಲಿಕಾರ್ಜುನಪ್ಪ, ಕಾರ್ಯನಿರ್ವಹಣಾಧಿಕಾರಿ, ವಿಶೇಷಾಧಿಕಾರಿ ಹಾಗೂ ಎಲ್ಲ ಶಾಲಾ ಕಾಲೇಜುಗಳ ಮುಖ್ಯಸ್ಥರು, ಸಿಬ್ಬಂದಿವರ್ಗದವರು ಹಾಗೂ ವಿದ್ಯಾರ್ಥಿಗಳು ಹಾಜರಿದ್ದರು. ಜ್ಯೂನಿಯರ್ ಬೆಟಾಲಿಯನ್ ಕಮಾಂಡೆಂಟ್ ಆರ್.ಬಿ.ಹಾರೋಮಠ್ ಅವರ ನೇತೃತ್ವದಲ್ಲಿ ಆಕರ್ಷಕ ಪಥ ಸಂಚಲನೆ ನಡೆಸಲಾಯಿತು. ಇದೇ ಸಂದರ್ಭದಲ್ಲಿ ಇತ್ತೀಚಿಗೆ ನಿವೃತ್ತರಾದ ನೌಕರವರ್ಗದವರನ್ನು ಸನ್ಮಾನಿಸಲಾಯಿತು.