ಸುದ್ದಿಗಳು

ಜಾತ್ಯಾತೀತ ತತ್ವದಿಂದ ದೇಶ ಸುಭದ್ರ – ಪ್ರೊ.ಕೆ.ಈ.ರಾಧಾಕೃಷ್ಣ
ಜಾತ್ಯಾತೀತ ತತ್ವದಿಂದ ದೇಶ ಸುಭದ್ರ - ಪ್ರೊ.ಕೆ.ಈ.ರಾಧಾಕೃಷ್ಣ

ಮಲ್ಲಾಡಿಹಳ್ಳಿ 10-08-2022: ವಿದ್ಯಾರ್ಥಿ ಜೀವನದಿಂದಲೇ ಜಾತ್ಯಾತೀತ ತತ್ವವನ್ನು ಪಾಲಿಸಿದಾಗ

ವಿದ್ಯಾರ್ಥಿಗಳಿಗೆ ಏಕಾಗ್ರತೆ ಅತ್ಯವಶ್ಯ-ಬ್ರಹ್ಮನಿಷ್ಠಾನಂದ ಸ್ವಾಮೀಜಿ
ವಿದ್ಯಾರ್ಥಿಗಳಿಗೆ ಏಕಾಗ್ರತೆ ಅತ್ಯವಶ್ಯ-ಬ್ರಹ್ಮನಿಷ್ಠಾನಂದ ಸ್ವಾಮೀಜಿ

ವಿದ್ಯಾರ್ಥಿಗಳು ವಿದ್ಯಾಭ್ಯಾಸದ ಹಂತದಲ್ಲಿ ಏಕಾಗ್ರತೆ ಅತ್ಯವಶ್ಯ ಎಂದು ಚಿತ್ರದುರ್ಗ

Follow Us

ಪ್ರತಿಭೆಗೆ ಪುರಸ್ಕಾರ ದೊರೆತರೆ ಏನನ್ನಾದರೂ ಸಾಧಿಸಲು ಸಾಧ್ಯ-ಪ್ರೊ.ಟಿ.ಎಚ್.ಕೃಷ್ಣಮೂರ್ತಿ

ಮಂಗಳವಾರ, ದಶಂಬರ 12th, 2017

ಮಲ್ಲಾಡಿಹಳ್ಳಿ
ಯಾವುದೇ ರಂಗದಲ್ಲಿ ಪ್ರತಿಭೆಗೆ ಪುರಸ್ಕಾರ ದೊರೆತರೆ ಏನನ್ನಾದರೂ ಸಾಧಿಸಲು ಸಾಧ್ಯವಾಗುತ್ತದೆ ಎಂದು ಅನಾಥಸೇವಾಶ್ರಮದ ವಿಶೇಷಾಧಿಕಾರಿ ಪ್ರೊ.ಟಿ.ಎಚ್.ಕೃಷ್ಣಮೂರ್ತಿ ಹೇಳಿದರು. ಅವರು ಮಲ್ಲಾಡಿಹಳ್ಳಿ ಅನಾಥಸೇವಾಶ್ರಮ ಮತ್ತು ಹಳೆಯ ವಿದ್ಯಾರ್ಥಿಗಳ ಸಂಘದ ಸಹಯೋಗದೊಂದಿಗೆ ಏರ್ಪಡಿಸಿದ್ದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡುತ್ತಾ ಹಳೆಯ ವಿದ್ಯಾರ್ಥಿಗಳು ಪ್ರಸ್ತುತ ಓದುತ್ತಿರುವ ವಿದ್ಯಾರ್ಥಿಗಳಿಗೆ ನೀಡುವ ಪ್ರೋತ್ಸಾಹ ತುಂಬಾ ಶ್ಲಾಘನೀಯವಾದದ್ದಾಗಿದೆ. ಇಲ್ಲಿ ಕಲಿತ ವಿದ್ಯಾರ್ಥಿಗಳು ಸಮಾಜದಲ್ಲಿ ಗೌರವಯುತ ಸ್ಥಾನಗಳನ್ನು ಪಡೆದುಕೊಂಡು ಮುಂದಿನ ವಿದ್ಯಾರ್ಥಿಗಳು ನಮ್ಮಂಥಾಗಲಿ ಎಂದು ಹಾರೈಸಿ ನೀಡುವ ಪ್ರೋತ್ಸಾಹ ಮತ್ತು ಸಂಸ್ಥೆಯ ಬಗೆಗಿನ ಕಾಳಜಿಯಿಂದ ಸಮಾಜೋಪಯೋಗಿ ಕಾರ್ಯಗಳು ನಡೆಯುತ್ತಿರುವುದು ಸಂತೋಷ ತಂದಿದೆ ಹಾಗೆಯೇ ಅನಾಥಸೇವಾಶ್ರಮದ ಅಧ್ಯಕ್ಷರಾದ ಡಾ.ಶಿವಮೂರ್ತಿ ಮುರುಘಾ ಶರಣರ ಸಮಾಜಮುಖಿ ಚಿಂತನೆಗಳನ್ನು ಹಳೆಯ ವಿದ್ಯಾರ್ಥಿಗಳು ಅನುಸರಿಸುತ್ತಿರುವುದು ಮಾದರಿಯಾಗಿದೆ ಎಂದರು.
ನಿವೃತ್ತ ಮುಖ್ಯ ಅಭಿಯಂತರರಾದ ಎನ್.ಸಿ.ಚಂದ್ರಪ್ಪ ಮಾತನಾಡಿ ರಾಘವೇಂದ್ರ ಸ್ವಾಮೀಜಿ ಹಾಗೂ ಸೂರುದಾಸ್ ಸ್ವಾಮೀಜಿಯವರು ಕಟ್ಟಿದ ಬೃಹತ್ ಸಂಸ್ಥೆಯಡಿಯಲ್ಲಿ ಓದುತ್ತಿರುವ ನೀವುಗಳೆಲ್ಲರೂ ಧನ್ಯರು ನಗರ ಪ್ರದೇಶದಲ್ಲಿ ಸಿಗುತ್ತಿರುವ ಸೌಲಭ್ಯಗಳು ಗ್ರಾಮೀಣ ಪ್ರದೇಶಕ್ಕೂ ದೊರೆಯಲಿ ಎಂದು ಅವರು ಶ್ರಮಿಸಿದ್ದರು ಇದರ ಜೊತೆಯಲ್ಲಿ ಇಂದಿನ ಅಧ್ಯಕ್ಷರು ಅದಕ್ಕೆ ಪೂರಕವಾದ ಆಧುನಿಕ ಸೌಲಭ್ಯಗಳು ಸಹ ಸಿಗುವಂತೆ ಮಾಡಿರುವುದು ನಿಮ್ಮ ಮುಂದಿನ ಸಮಾಜಿಕ ಹಾಗೂ ನೈತಿಕ ಬದುಕನ್ನು ಕಟ್ಟಿಕೊಡುತ್ತದೆ ಎಂದರು.
ಶಿವಮೊಗ್ಗ ಜಿಲ್ಲಾ ಪ್ರಶಸ್ತಿ ವಿಜೇತ ಚೆನ್ನಪ್ಪ ಆರ್ ಆಚಾರ್ಯ ಮಾತನಾಡಿ ಸಮಾಜ ಇಂದು ಬದಲಾಗಿದ್ದು ಜನರು ಉತ್ತಮ ವಾತಾವರಣದ ಜೊತೆಯಲ್ಲಿ ಸಿಗುವಂತಹ ಶಿಕ್ಷಣವನ್ನು ಇಷ್ಟಪಡುತ್ತಾರೆ ಮುಂದಿನ ಭವಿಷ್ಯದ ಪ್ರಜೆಯಾಗುವ ನೀವುಗಳೆಲ್ಲರೂ ಸಮಾಜಮುಖಿ ಕಾರ್ಯಗಳಲ್ಲಿ ತೊಡಗಿಕೊಳ್ಳಬೇಕು ಎಂದರು. ಇದೇ ಸಂದರ್ಭದಲ್ಲಿ ಅತೀ ಹೆಚ್ಚು ಅಂಕಗಳಿಸಿದ ಎಲ್ಲ ಶಾಲಾ ಕಾಲೇಜುಗಳ ವಿದ್ಯಾರ್ಥಿಗಳಿಗೆ ಪುರಸ್ಕಾರ ನೀಡಿ ಗೌರವಿಸಲಾಯಿತು. ಜಿಲ್ಲಾ ಉತ್ತಮ ಶಿಕ್ಷಕ ಪ್ರಶಸ್ತಿ ಪಡೆದ ಹಿರಿಯ ವಿದ್ಯಾರ್ಥಿ ಹಾಗೂ ಶಿಕಾರಿಪುರ ತಾಲ್ಲೂಕು ಶೆಟ್ಟಿಹಳ್ಳಿ ಶಾಲೆಯ ವಿಜ್ಞಾನ ಶಿಕ್ಷಕ ಜಿ.ಎಂ.ಸುದರ್ಶನ್ ಇವರನ್ನು ಸನ್ಮಾನಿಸಲಾಯಿತು.
ಪ್ರಾಧ್ಯಾಪಕ ಎಸ್.ಪಿ.ರವಿ ಸ್ವಾಗತಿಸಿ, ಪ್ರೌಢಶಾಲೆಯ ಉಪಪ್ರಾಚಾರ್ಯ ಕೆ.ಎಂ.ತಿಮ್ಮರಾಜು ನಿರೂಪಿಸಿ, ಬಿ.ಎ.ಎಂ.ಎಸ್ ಕಾಲೇಜಿನ ಉಪಪ್ರಾಚಾರ್ಯ ಡಾ.ಕೆ.ವಿ.ರಾಜಶೇಖರ್ ವಂದಿಸಿದರು. ಹಳೆಯ ವಿದ್ಯಾರ್ಥಿಗಳು, ಶಾಲಾ ಕಾಲೇಜುಗಳ ಮುಖ್ಯಸ್ಥರು, ಸಿಬ್ಬಂದಿವರ್ಗದವರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.