ಸುದ್ದಿಗಳು

ಜಾತ್ಯಾತೀತ ತತ್ವದಿಂದ ದೇಶ ಸುಭದ್ರ – ಪ್ರೊ.ಕೆ.ಈ.ರಾಧಾಕೃಷ್ಣ
ಜಾತ್ಯಾತೀತ ತತ್ವದಿಂದ ದೇಶ ಸುಭದ್ರ - ಪ್ರೊ.ಕೆ.ಈ.ರಾಧಾಕೃಷ್ಣ

ಮಲ್ಲಾಡಿಹಳ್ಳಿ 10-08-2022: ವಿದ್ಯಾರ್ಥಿ ಜೀವನದಿಂದಲೇ ಜಾತ್ಯಾತೀತ ತತ್ವವನ್ನು ಪಾಲಿಸಿದಾಗ

ವಿದ್ಯಾರ್ಥಿಗಳಿಗೆ ಏಕಾಗ್ರತೆ ಅತ್ಯವಶ್ಯ-ಬ್ರಹ್ಮನಿಷ್ಠಾನಂದ ಸ್ವಾಮೀಜಿ
ವಿದ್ಯಾರ್ಥಿಗಳಿಗೆ ಏಕಾಗ್ರತೆ ಅತ್ಯವಶ್ಯ-ಬ್ರಹ್ಮನಿಷ್ಠಾನಂದ ಸ್ವಾಮೀಜಿ

ವಿದ್ಯಾರ್ಥಿಗಳು ವಿದ್ಯಾಭ್ಯಾಸದ ಹಂತದಲ್ಲಿ ಏಕಾಗ್ರತೆ ಅತ್ಯವಶ್ಯ ಎಂದು ಚಿತ್ರದುರ್ಗ

Follow Us

ಸಾಹಿತಿ ರಾಘವೇಂದ್ರ ಪಾಟೀಲರಿಗೆ ಸ್ವರ ಸುರಭಿ ವಾರ್ಷಿಕ ಪ್ರಶಸ್ತಿ

ಗುರುವಾರ, ನವೆಂಬರ 28th, 2013

ಮಲ್ಲಾಡಿಹಳ್ಳಿ, 28-11-2013:

ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ರಾಘವೇಂದ್ರ ಪಾಟೀಲರು ಬೆಂಗಳೂರಿನ ಸ್ವರಸುರಭಿ ಟ್ರಸ್ಟ್ ನವರು ನೀಡುವ ವಾರ್ಷಿಕ ವಿಶೇಷ ಪ್ರಶಸ್ತಿಯನ್ನು ಡಿಸೆಂಬರ್ 1ರಂದು ಬೆಂಗಳೂರಿನಲ್ಲಿ ನಡೆಯಲಿರುವ ಸಮಾರಂಭದಲ್ಲಿ ಸ್ವೀಕರಿಸಲಿರುವರು. ರಾಘವೇಂದ್ರ ಪಾಟೀಲರ ಸಾಹಿತ್ಯ, ಸಮಾಜ ಸೇವೆ, ಆಡಳಿತ ಮುಂತಾದ ಸಾಧನೆಯನ್ನು ಗುರುತಿಸಿ ಈ ಪ್ರಶಸ್ತಿಯನ್ನು ನೀಡಲಿರುವರು. ಕಾರ್ಯಕ್ರಮದಲ್ಲಿ ಸ್ವರಸುರಭಿ ಟ್ರಸ್ಟಿನ 9ನೇ ವರ್ಷದ ವಾರ್ಷಿಕ ಸಮಾರಂಭದಲ್ಲಿ ಬಾಳಪ್ಪ ಹುಕ್ಕೇರಿ ಹಾಗೂ ಮೃತ್ಯಂಜಯ ದೊಡ್ಡವಾಡರ ಸಂಗೀತ ಸಂಯೋಜನೆಯ ಬೆಟಗೇರಿ ಕೃಷ್ಣಶರ್ಮರವರ ಗೀತೋತ್ಸವ ಸಮಾರಂಭ ಜರುಗಲಿದೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಖ್ಯಾತ ಕವಿ ಎಚ್.ಎಸ್.ವೆಂಕಟೇಶಮೂರ್ತಿ ವಹಿಸಲಿರುವರು. ಕಾರ್ಯಕ್ರಮದ ಉದ್ಘಾಟನೆಯನ್ನು ಬೆಂಗಳೂರಿನ ಬಸವನಗುಡಿ ಕ್ಷೇತ್ರದ ಶಾಸಕ ರವಿಸುಬ್ರಹ್ಮಣ್ಯ ನೆರವೇರಿಸಲಿರುವರು. ಬಿ.ಬಿ.ಎಂ.ಪಿ. ಮಹಾಪೌರ ಬಿ.ಎಸ್. ಸತ್ಯನಾರಾಯಣ, ಪ್ರಸಿದ್ಧ ಸಂಗೀತ ಸಂಯೋಜಕ ಮಾಂಡೋಲಿನ್ ಪ್ರಸಾದ್ ಹಾಗೂ ಇನ್ನಿತರರು ಉಪಸ್ಥಿತರಿರುವರು.