ಸುದ್ದಿಗಳು

ಜಾತ್ಯಾತೀತ ತತ್ವದಿಂದ ದೇಶ ಸುಭದ್ರ – ಪ್ರೊ.ಕೆ.ಈ.ರಾಧಾಕೃಷ್ಣ
ಜಾತ್ಯಾತೀತ ತತ್ವದಿಂದ ದೇಶ ಸುಭದ್ರ - ಪ್ರೊ.ಕೆ.ಈ.ರಾಧಾಕೃಷ್ಣ

ಮಲ್ಲಾಡಿಹಳ್ಳಿ 10-08-2022: ವಿದ್ಯಾರ್ಥಿ ಜೀವನದಿಂದಲೇ ಜಾತ್ಯಾತೀತ ತತ್ವವನ್ನು ಪಾಲಿಸಿದಾಗ

ವಿದ್ಯಾರ್ಥಿಗಳಿಗೆ ಏಕಾಗ್ರತೆ ಅತ್ಯವಶ್ಯ-ಬ್ರಹ್ಮನಿಷ್ಠಾನಂದ ಸ್ವಾಮೀಜಿ
ವಿದ್ಯಾರ್ಥಿಗಳಿಗೆ ಏಕಾಗ್ರತೆ ಅತ್ಯವಶ್ಯ-ಬ್ರಹ್ಮನಿಷ್ಠಾನಂದ ಸ್ವಾಮೀಜಿ

ವಿದ್ಯಾರ್ಥಿಗಳು ವಿದ್ಯಾಭ್ಯಾಸದ ಹಂತದಲ್ಲಿ ಏಕಾಗ್ರತೆ ಅತ್ಯವಶ್ಯ ಎಂದು ಚಿತ್ರದುರ್ಗ

Follow Us

ವಿದ್ಯಾರ್ಥಿಗಳ ಚಿತ್ತ ಓದಿನತ್ತ – ಪ್ರೊ.ಟಿ.ಎಚ್.ಕೃಷ್ಣಮೂರ್ತಿ

ಶನಿವಾರ, ಫೆಬ್ರವರಿ 11th, 2017

ಮಲ್ಲಾಡಿಹಳ್ಳಿ
ವಿದ್ಯಾರ್ಥಿಗಳ ಚಿತ್ತ ಓದಿನತ್ತ ಇರಬೇಕು ಎಂದು ಅನಾಥಸೇವಾಶ್ರಮದ ವಿಶೇಷಾಧಿಕಾರಿ ಪ್ರೊ.ಟಿ.ಎಚ್.ಕೃಷ್ಣಮೂರ್ತಿ ಹೇಳಿದರು. ಅವರು ಮಲ್ಲಾಡಿಹಳ್ಳಿ ಅನಾಥಸೇವಾಶ್ರಮದ ಪದವಿಪೂರ್ವ ಕಾಲೇಜಿನಲ್ಲಿ ನಡೆದ ವಿದ್ಯಾರ್ಥಿ ಸಂಘದ ಸಮಾರೋಪ ಸಮಾರಂಭದಲ್ಲಿ ಮಾತನಾಡುತ್ತಾ ವಿದ್ಯಾರ್ಥಿಗಳು ಮನಸ್ಸನ್ನು ಕೇಂದ್ರೀಕರಿಸಿಕೊಂಡು ಮುಂದೆ ಬರುವ ಪರೀಕ್ಷೆಗಳನ್ನು ಗಮನದಲ್ಲಿರಿಸಿಕೊಂಡು ವಿದ್ಯಾಭ್ಯಾಸದ ಕಡೆಗೆ ಮಹತ್ವವನ್ನು ನೀಡಿದ್ದೇ ಆದಲ್ಲಿ ಮುಂದಿನ ಭವಿಷ್ಯ ಉಜ್ವಲವಾಗುತ್ತದೆ ಎಂದರು. ಪ್ರಾಮಾಣಿಕ ಪ್ರಯತ್ನ ಮಾಡುವುದರಿಂದ ಕಲಿಸಿದ ಗುರುಗಳಿಗೆ ಪೋಷಕರಿಗೆ ಮತ್ತು ಸಂಸ್ಥೆಗೆ ಕೀರ್ತಿ ತರುವಂತಹ ಪ್ರಯತ್ನ ಮಾಡಬೇಕು ಸಮಾಜದಲ್ಲಿ ಉನ್ನತ ಹುದ್ದೆಗಳನ್ನು ಅಲಂಕರಿಸಬೇಕಾದರೆ ವಿದ್ಯಾರ್ಥಿ ದೆಸೆಯಿಂದಲೇ ಓದಿನ ಕಡೆಗೆ ಹೆಚ್ಚು ಗಮನ ಕೊಡಬೇಕು ಸಾಂಸ್ಕøತಿಕ ಸಮಾರಂಭಗಳಲ್ಲಿ ಪಾಲ್ಗೊಳ್ಳಿ ಆದರೆ ಭವಿಷ್ಯವನ್ನು ರೂಪಿಸಿಕೊಳ್ಳಬೇಕಾದರೆ ಹೆಚ್ಚು ಓದಿನ ಕಡೆ ಇರಲಿ ಎನ್ನುವ ಕಿವಿಮಾತನ್ನು ಹೇಳಿದರು.
ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಆಗಮಿಸಿದ್ದ ದಾವಣಗೆರೆ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ವಾಮದೇವಪ್ಪ ಮಾತನಾಡಿ ಸಮಯ ಬಹಳ ಅತ್ಯಮೂಲ್ಯವಾಗಿದ್ದು ಅದನ್ನು ಅಪಮೌಲ್ಯಗೊಳಿಸಿಕೊಳ್ಳದಿರಿ ತಿರುಕನ ಭೂಮಿಯಲ್ಲಿ ವಿದ್ಯಾರ್ಜನೆ ಮಾಡುವ ನೀವುಗಳು ನಿಮ್ಮ ಶ್ರಮವನ್ನು ಓದಿನತ್ತ ಮಾಡಿದಾಗ ಮಾತ್ರ ಇಲ್ಲಿಗೆ ಬಂದು ಓದಿದ್ದಕ್ಕೆ ಸಾರ್ಥಕವಾಗುತ್ತದೆ ಎಂದರು.
ಅಧ್ಯಕ್ಷತೆ ವಹಿಸಿದ್ದ ಪ್ರಾಚಾರ್ಯ ಟಿ.ಎಚ್.ಗುಡ್ಡಪ್ಪ ಮಾತನಾಡಿ ಗುರುವಿಗೆ ಶಿಷ್ಯಂದಿರೇ ಆಸ್ತಿಗಳು ಸಮಾಜದಲ್ಲಿ ನಿಮ್ಮ ವರ್ತನೆಗಳು ನಮ್ಮ ಗೌರವವನ್ನು ಹೆಚ್ಚಿಸುವಂತಿರಬೇಕು ನನ್ನ 33 ವರ್ಷಗಳ ಈ ವೃತ್ತಿ ಜೀವನವು ಕೊನೆಗೊಳ್ಳುತ್ತಿದ್ದು ಸಾವಿರಾರು ಶಿಷ್ಯಂದಿರು ಸಮಾಜದಲ್ಲಿ ಉನ್ನತ ಸ್ಥಾನಕ್ಕೇರಿ ನಮ್ಮ ಗೌರವವನ್ನು ಹೆಚ್ಚಿಸಿದ್ದಾರೆ ನೀವುಗಳು ಸಹ ಉತ್ತಮ ಪ್ರಜೆಗಳು ಆದಲ್ಲಿ ಅದೇ ನಮಗೆ ಕೊಡುವ ಗುರುಕಾಣಿಕೆ ಎಂದರು. ಕಳೆದ 5 ವರ್ಷಗಳಿಂದ ನಾನು ನಿರ್ವಹಿಸುತ್ತಿರುವ ಪ್ರಾಚಾರ್ಯರ ಹುದ್ದೆ ಸಂತಸ ತಂದಿದೆ ಆಡಳಿತ ಮಂಡಳಿ ಮತ್ತು ಅಧ್ಯಾಪಕರ ಸಹಾಯದಿಂದ ಇದು ಸಾಧ್ಯವಾಗಿದೆ ಎಂದರು.
ಇದೇ ಸಂದರ್ಭದಲ್ಲಿ ವಾಮದೇವಪ್ಪ ಇವರನ್ನು ಸನ್ಮಾನಿಸಲಾಯಿತು. ಎನ್.ಎಸ್.ಎಸ್ ಅಧಿಕಾರಿ ಎಚ್.ಜಿ.ಗಿರೀಶ್ ಸ್ವಾಗತಿಸಿ, ವೈ.ಬಿ.ವನಜಾಕ್ಷಮ್ಮ ನಿರೂಪಿಸಿ, ಶಿವಲಿಂಗಪ್ಪ ವಂದಿಸಿದರು. ವಿದ್ಯಾರ್ಥಿಗಳು ಸಾಂಸ್ಕøತಿಕ ಕಾರ್ಯಕ್ರಮ ನಡೆಸಿಕೊಟ್ಟರು.

Honour to Vamadevappa Special Officer Krishnamurthy and T.H.guddappa also seen