ಸುದ್ದಿಗಳು

ಜಾತ್ಯಾತೀತ ತತ್ವದಿಂದ ದೇಶ ಸುಭದ್ರ – ಪ್ರೊ.ಕೆ.ಈ.ರಾಧಾಕೃಷ್ಣ
ಜಾತ್ಯಾತೀತ ತತ್ವದಿಂದ ದೇಶ ಸುಭದ್ರ - ಪ್ರೊ.ಕೆ.ಈ.ರಾಧಾಕೃಷ್ಣ

ಮಲ್ಲಾಡಿಹಳ್ಳಿ 10-08-2022: ವಿದ್ಯಾರ್ಥಿ ಜೀವನದಿಂದಲೇ ಜಾತ್ಯಾತೀತ ತತ್ವವನ್ನು ಪಾಲಿಸಿದಾಗ

ವಿದ್ಯಾರ್ಥಿಗಳಿಗೆ ಏಕಾಗ್ರತೆ ಅತ್ಯವಶ್ಯ-ಬ್ರಹ್ಮನಿಷ್ಠಾನಂದ ಸ್ವಾಮೀಜಿ
ವಿದ್ಯಾರ್ಥಿಗಳಿಗೆ ಏಕಾಗ್ರತೆ ಅತ್ಯವಶ್ಯ-ಬ್ರಹ್ಮನಿಷ್ಠಾನಂದ ಸ್ವಾಮೀಜಿ

ವಿದ್ಯಾರ್ಥಿಗಳು ವಿದ್ಯಾಭ್ಯಾಸದ ಹಂತದಲ್ಲಿ ಏಕಾಗ್ರತೆ ಅತ್ಯವಶ್ಯ ಎಂದು ಚಿತ್ರದುರ್ಗ

Follow Us

3000 ವಿದ್ಯಾರ್ಥಿಗಳಿಗೆ ಏಕಕಾಲಕ್ಕೆ ಯೋಗ ತರಬೇತಿ

ಸೋಮವಾರ, ಜೂನ್ 20th, 2016

ಮಲ್ಲಾಡಿಹಳ್ಳಿ ಅನಾಥಸೇವಾಶ್ರಮದಲ್ಲಿ ಎಲ್ಲ ಶಾಲಾ ಕಾಲೇಜುಗಳ ಒಟ್ಟು 3000 ವಿದ್ಯಾರ್ಥಿಗಳಿಗೆ ಜೂನ್-21ರ ಪೂರ್ವಭಾವಿಯಾಗಿ ವಿವಿಧ ಯೋಗಾಸನಗಳು ಹಾಗೂ ಸೂರ್ಯನಮಸ್ಕಾರ ಪದ್ಧತಿಯೊಂದಿಗೆ ತರಬೇತಿ ನೀಡಲಾಯಿತು. ಪೂಜ್ಯ ಶ್ರೀ ರಾಘವೇಂದ್ರ ಸ್ವಾಮೀಜಿ ರಚಿತ ಯೋಗ ಪದ್ಧತಿಯನ್ನು ಯೋಗ ತರಬೇತುದಾರ ಎಸ್.ಆರ್.ಸಂತೋಷ್ ಕುಮಾರ್ ಮಾರ್ಗದರ್ಶನದಲ್ಲಿ 12 ಆಸನಗಳು, ಸೂರ್ಯನಮಸ್ಕಾರ ಮತ್ತು ಧ್ಯಾನ ಪದ್ಧತಿಯನ್ನು 1 ಗಂಟೆಗೂ ಹೆಚ್ಚು ಸಮಯದಲ್ಲಿ ಹೇಳಿಕೊಡಲಾಯಿತು. ಇದೇ ಮಂಗಳವಾರ ಜೂನ್-21ರಂದು ನಡೆಯಲಿರುವ ವಿಶ್ವಯೋಗ ದಿನಾಚರಣೆ ಸಂದರ್ಭದಲ್ಲಿ ಇಲ್ಲಿ ಕಲಿತ ವಿದ್ಯಾರ್ಥಿಗಳಿಂದ ಪ್ರದರ್ಶನ ಏರ್ಪಡಿಸಲಾಗುವುದು. ಡಾ.ಶಿವಮೂರ್ತಿ ಮುರುಘಾಶರಣರ ಸಾನ್ನಿಧ್ಯ ವಹಿಸಲಿರುವರು. ಟ್ರಸ್ಟಿ ಡಾ.ಜಿ.ಎನ್.ಮಲ್ಲಿಕಾರ್ಜುನಪ್ಪ, ಯೋಗಾಚಾರ್ಯ ಎನ್.ಎನ್.ಶಿವನಗೌಡ, ವಿಶೇಷಾಧಿಕಾರಿ ಪ್ರೊ.ಟಿ.ಎಚ್.ಕೃಷ್ಣಮೂರ್ತಿ ಮತ್ತು ಎಲ್ಲ ಶಾಲಾ ಕಾಲೇಜುಗಳ ಮುಖ್ಯಸ್ಥರು, ಅಧ್ಯಾಪಕರು ಹಾಗೂ ಸಿಬ್ಬಂದಿವರ್ಗದವರು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವರು.

ಮಲ್ಲಾಡಿಹಳ್ಳಿ ಅನಾಥಸೇವಾಶ್ರಮ ವತಿಯಿಂದ 30 ಸರ್ಕಾರಿ ಶಾಲೆಗಳಲ್ಲಿ ಯೋಗ ತರಬೇತಿ

ಮಲ್ಲಾಡಿಹಳ್ಳಿ ಅನಾಥಸೇವಾಶ್ರಮದ ಶತಮಾನೋತ್ಸವ ದೈಹಿಕ ಶಿಕ್ಷಣ ಮಹಾವಿದ್ಯಾಲಯದ ಶಿಕ್ಷಣಾರ್ಥಿಗಳು ಹೊಳಲ್ಕೆರೆ ತಾಲ್ಲೂಕಿನ ವಿವಿಧ ಹಿರಿಯ ಪ್ರಾಥಮಿಕ ಶಾಲೆಗಳಲ್ಲಿ ವಿಶ್ವಯೋಗ ದಿನಾಚರಣೆ ಅಂಗವಾಗಿ 3 ದಿನಗಳ ಯೋಗ ತರಬೇತಿ ಶಿಕ್ಷಣವನ್ನು ನೀಡಿದರು. ಶಿಕ್ಷಣಾರ್ಥಿಗಳು ಶಾಲೆಗೆ ಹೋದ ಸಂದರ್ಭದಲ್ಲಿ ಅಲ್ಲಿಯ ಮುಖ್ಯೋಪಾಧ್ಯಾಯರು ಮತ್ತು ಶಿಕ್ಷಕರ ಸಹಕಾರದೊಂದಿಗೆ 16 ಆಸನಗಳ ತರಬೇತಿಯನ್ನು ನೀಡಲಾಯಿತು. ಬಿ.ಪಿ.ಇಡಿ ಕಾಲೇಜಿನ ಪ್ರಾಚಾರ್ಯ ಪ್ರೊ.ಟಿ.ವೆಂಕಟೇಶ್ ಮಾರ್ಗದರ್ಶನದಲ್ಲಿ ಶಿಕ್ಷಣಾರ್ಥಿಗಳು ಶಾಲೆಯ ವಿದ್ಯಾರ್ಥಿಗಳಿಗೆ ಕಲಿಸಿದ್ದು ವಿನೂತನ ಪ್ರಯೋಗವಾಗಿದ್ದು ಮುಂದೆ ಅದನ್ನು ಜಿಲ್ಲೆಯ ಎಲ್ಲ ಶಾಲೆಗಳಿಗೂ ವಿಸ್ತರಿಸಲಾಗುವುದು ಎಂದು ಅನಾಥಸೇವಾಶ್ರಮದ ವಿಶೇಷಾಧಿಕಾರಿ ಪ್ರೊ.ಟಿ.ಎಚ್.ಕೃಷ್ಣಮೂರ್ತಿ ಹೇಳಿದರು.

Malladihalli IDY 2016