News and Events

ಜಾತ್ಯಾತೀತ ತತ್ವದಿಂದ ದೇಶ ಸುಭದ್ರ – ಪ್ರೊ.ಕೆ.ಈ.ರಾಧಾಕೃಷ್ಣ
ಜಾತ್ಯಾತೀತ ತತ್ವದಿಂದ ದೇಶ ಸುಭದ್ರ - ಪ್ರೊ.ಕೆ.ಈ.ರಾಧಾಕೃಷ್ಣ

ಮಲ್ಲಾಡಿಹಳ್ಳಿ 10-08-2022: ವಿದ್ಯಾರ್ಥಿ ಜೀವನದಿಂದಲೇ ಜಾತ್ಯಾತೀತ ತತ್ವವನ್ನು ಪಾಲಿಸಿದಾಗ

ವಿದ್ಯಾರ್ಥಿಗಳಿಗೆ ಏಕಾಗ್ರತೆ ಅತ್ಯವಶ್ಯ-ಬ್ರಹ್ಮನಿಷ್ಠಾನಂದ ಸ್ವಾಮೀಜಿ
ವಿದ್ಯಾರ್ಥಿಗಳಿಗೆ ಏಕಾಗ್ರತೆ ಅತ್ಯವಶ್ಯ-ಬ್ರಹ್ಮನಿಷ್ಠಾನಂದ ಸ್ವಾಮೀಜಿ

ವಿದ್ಯಾರ್ಥಿಗಳು ವಿದ್ಯಾಭ್ಯಾಸದ ಹಂತದಲ್ಲಿ ಏಕಾಗ್ರತೆ ಅತ್ಯವಶ್ಯ ಎಂದು ಚಿತ್ರದುರ್ಗ

Follow Us

ಒಳ್ಳೆತನಗಳು ಹೆಚ್ಚು ಬಿಂಬಿತವಾದಷ್ಟು ಸಮಾಜದ ಪರಿವರ್ತನೆ ಸಾಧ್ಯ-ಡಾ.ಎಸ್.ಎಸ್.ಪಾಟೀಲ್

Monday, April 24th, 2017

ಮಲ್ಲಾಡಿಹಳ್ಳಿ
ಒಳ್ಳೆತನಗಳು ಹೆಚ್ಚು ಬಿಂಬಿತವಾದಷ್ಟು ಸಮಾಜದ ಪರಿವರ್ತನೆ ಸಾಧ್ಯ ಎಂದು ಕುವೆಂಪು ವಿಶ್ವವಿದ್ಯಾನಿಲಯದ ಸ್ನಾತಕೋತ್ತರ ಶಿಕ್ಷಣ ಸಂಶೋಧನಾ ಹಾಗೂ ಅಧ್ಯಯನ ವಿಭಾಗದ ಮುಖ್ಯಸ್ಥ ಡಾ.ಎಸ್.ಎಸ್.ಪಾಟೀಲ್ ಹೇಳಿದರು. ಅವರು ಮಲ್ಲಾಡಿಹಳ್ಳಿ ಅನಾಥಸೇವಾಶ್ರಮದ ಶ್ರೀ ರಾಘವೇಂದ್ರ ಶಿಕ್ಷಣ ಮಹಾವಿದ್ಯಾಲಯದ 2016-17ನೇ ಸಾಲಿನ ವಿದ್ಯಾರ್ಥಿ ಸಾಂಸ್ಕತಿಕ ಸಂಘದ ಉದ್ಘಾಟನಾ ಸಮಾರಂಭವನ್ನು ಉದ್ಘಾಟಿಸಿ ಮಾತನಾಡುತ್ತಾ ಇಂದು ಕ್ರೌರ್ಯ, ಹಿಂಸೆ, ಭ್ರಷ್ಟಾಚಾರಗಳು ಮಾಧ್ಯಮಗಳಲ್ಲಿ ಹೆಚ್ಚು ಬಿಂಬಿತವಾಗುತ್ತಿರುವುದು ವಿಷಾದನೀಯ ಸಮಾಜದಲ್ಲಿ ನೈತಿಕ ಮೌಲ್ಯಗಳನ್ನು ಬಿತ್ತುವ ಸಲುವಾಗಿ ಒಳ್ಳೆತನಗಳನ್ನು ಹೆಚ್ಚು ಪ್ರಚಾರ ಮಾಡಿದಲ್ಲಿ ಸಮಾಜದಲ್ಲಿ ಪರಿವರ್ತನೆ ಸಾಧ್ಯವಾಗುತ್ತದೆ ಈ ನಿಟ್ಟಿನಲ್ಲಿ ಶಿಕ್ಷಕ ಸಮುದಾಯವು ಹೆಚ್ಚು ಶ್ರಮವಹಿಸುತ್ತಿದ್ದು ಅದಕ್ಕೆ ಸೂಕ್ತವಾದ ಪ್ರೋತ್ಸಾಹ ಮತ್ತು ಪುರಸ್ಕಾರಗಳ ಅಗತ್ಯತೆ ಇದೆ ಶಿಕ್ಷಕ ವೃತ್ತಿಯನ್ನು ಪ್ರೀತಿಸಿ, ಗೌರವಿಸಿ ಹಾಗೂ ನಿರಂತರ ಅಧ್ಯಯನ ಶೀಲರಾಗುವಂತೆ ಕರೆ ನೀಡಿದರಲ್ಲದೆ ಉತ್ತಮ ಶಿಕ್ಷಕನಾಗುವವನಿಗೆ ಅನುಭವ ಪಡೆದುಕೊಂಡು ಬೋಧನಾ ವಿಧಾನದಲ್ಲಿ ಅದನ್ನು ಸೇರಿಸಿಕೊಂಡು ಬೋಧಿಸಿದಲ್ಲಿ ಹೆಚ್ಚು ಪರಿಣಾಮಕಾರಿಯಾಗುತ್ತದೆ ಪ್ರಸ್ತುತ ದಿನಮಾನದಲ್ಲಿ ಸ್ಪೋಕನ್ ಇಂಗ್ಲೀಷ್ ಕಲಿಸಿದಷ್ಟು ನಮ್ಮ ನಾಡಿನ ಜನರಿಗೆ ಸುಲಭವಾಗುವಂತೆ ಮತ್ತು ಪರಿಣಾಮಕಾರಿಯಾಗುವಂತೆ ಕನ್ನಡ ಭಾಷೆಯನ್ನು ಕಲಿಸುವ ಅಗತ್ಯತೆ ಇದೆ ಎಂದರು.
ಮುಖ್ಯ ಅತಿಥಿಯಾಗಿದ್ದ ಅನಾಥಸೇವಾಶ್ರಮ ಪದವಿಪೂರ್ವ ಕಾಲೇಜಿನ ಪ್ರಾಚಾರ್ಯ ಟಿ.ಎಚ್.ಗುಡ್ಡಪ್ಪ ಮಾತನಾಡಿ ಸಾಂಸ್ಕøತಿಕ ಒಲವು ಮತ್ತು ಆಧ್ಯಾತ್ಮಿಕ ಒಲವು ಶಿಕ್ಷಕನ ವೃತ್ತಿಗೆ ಮತ್ತಷ್ಟು ಮೆರಗನ್ನು ತರುತ್ತದೆ. ಉತ್ತಮ ಸಂಸ್ಕಾರವು ಉತ್ತಮ ದೇಶದ ನಿರ್ಮಾಣವನ್ನು ಸೃಷ್ಟಿಸುತ್ತದೆ ಎಂದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಅನಾಥಸೇವಾಶ್ರಮದ ವಿಶೇಷಾಧಿಕಾರಿ ಪ್ರೊ.ಟಿ.ಎಚ್.ಕೃಷ್ಣಮೂರ್ತಿ ಮಾತನಾಡಿ ಜೀವನದಲ್ಲಿ ಬರುವ ಅವಕಾಶಗಳನ್ನು ಉಪಯೋಗಿಸಿಕೊಂಡು ತನ್ನ ಗುರಿಯನ್ನು ಮುಟ್ಟುವವರೆಗೆ ಎಷ್ಟೇ ಕಷ್ಟಗಳು ಬಂದರೂ ಇಷ್ಟ ಪಟ್ಟು ಸವಿದು ಅನುಭವಿಸಿ ಮುಂದೆ ಸಾಗಿದಾಗ ಮಾತ್ರ ಪರಿಪೂರ್ಣ ವ್ಯಕ್ತಿತ್ವವನ್ನು ಹೊಂದಲು ಸಾಧ್ಯವಾಗುತ್ತದೆ ಪರಿಶ್ರಮ ಪಟ್ಟರೆ ಫಲವನ್ನು ಅನುಭವಿಸುತ್ತೀರಿ ಆದ್ದರಿಂದ ವಿದ್ಯಾರ್ಥಿ ಜೀವನವನ್ನು ಕಷ್ಟಪಟ್ಟು ಇಷ್ಟಪಟ್ಟು ಅಧ್ಯಾಪಕರ ಮಾರ್ಗದರ್ಶನದಲ್ಲಿ ರೂಪಿಸಿಕೊಳ್ಳಿ ಎಂದರು.
ಪ್ರಾಚಾರ್ಯ ಜಿ.ಯು.ನಾಗರಾಜು ಪ್ರಾಸ್ತಾವಿಕವಾಗಿ ಮಾತನಾಡಿದರು, ಪ್ರಶಿಕ್ಷಣಾರ್ಥಿಗಳಾದ ಕಾರ್ತಿಕ್ ಸ್ವಾಗತಿಸಿ, ಜಯಲಕ್ಷಿನಿರೂಪಿಸಿ ಮಾರುತಿ.ಎಸ್.ವಂದಿಸಿದರು. ಉಪನ್ಯಾಸಕರು ಹಾಗೂ ಸಿಬ್ಬಂದಿವರ್ಗದವರು ಉಪಸ್ಥಿತರಿದ್ದರು.